ದಿನದ ಸುದ್ದಿ
ರಂಗಕರ್ಮಿ ಮೋಹನಚಂದ್ರ ಅವರಿಗೆ ‘ಸಿಜಿಕೆ ರಂಗ ಪುರಸ್ಕಾರ’

ಸುದ್ದಿದಿನ,ಮಂಗಳೂರು : ಸಿಜಿಕೆ ಬೀದಿ ರಂಗ ದಿನದ ನೆನಪಿನಲ್ಲಿ ಪ್ರತೀ ಜಿಲ್ಲೆಯಲ್ಲಿ ನೀಡುವ ರಂಗ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರಂಗಕರ್ಮಿ ಮೋಹನಚಂದ್ರ ಯು. ಇವರು ಆಯ್ಕೆಯಾಗಿದ್ದಾರೆ. ಮೋಹನಚಂದ್ರ ಯು. ಅವರು, ಕರ್ನಾಟಕದ ನಾಟಕ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ದುಡಿಯುತ್ತಿರುವ ರಂಗಕರ್ಮಿ, ಪ್ರೊಸೀನಿಯಮ್ ಹಾಗೂ ಬೀದಿನಾಟಕದಲ್ಲಿ ಸತತವಾಗಿ ಕೆಲಸ ಮಾಡುತ್ತಿರುವ ಒಬ್ಬ ಪ್ರತಿಭಾವಂತ ನಿರ್ದೇಶಕ.
ತೃತೀಯ ರಂಗಭೂಮಿಯ ಜನಕ ಶ್ರೀ. ಬಾದಲ್ ಸರ್ಕಾರ್ ಜೊತೆ ನಿಕಟವಾಗಿ ಕೆಲಸ ಮಾಡಿರುವ ಇವರು ಕರ್ನಾಟಕದ ಉದ್ದಗಲದಲ್ಲಿ ಸಂಚರಿಸಿ ಬೀದಿ ನಾಟಕ ತಂಡಗಳನ್ನು ಕಟ್ಟಿ ಪರಿಣಾಮಕಾರಿ ನಾಟಕಗಳನ್ನು ಮಾಡಿಸಿದವರು. ‘ಸಮುದಾಯ’ದಲ್ಲಿ ಕೆಲಸ ಮಾಡಿರುವ ಇವರು ಸಾಕಷ್ಟು ರಾಜ್ಯಮಟ್ಟದ ಜಾಥಾಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
‘ನೀನಾಸಂ’ನಲ್ಲಿ ನಾಟಕ ಪದವಿಯನ್ನು ಪಡೆದು ಜನಜಾಗೃತಿಗಾಗಿ ನಾಟಕ ಮಾಧ್ಯಮವನ್ನು ವಿವಿಧ ರೀತಿಯಲ್ಲಿ ಬಳಸಿ ಕೆಲವು ಹೊಸ ಪ್ರಕಾರಗಳನ್ನು ಯಶಸ್ವಿಯಾಗಿ ಹುಟ್ಟುಹಾಕಿದ್ದಾರೆ. ತೀಕ್ಷ್ಣವಾದ ವಿಚಾರಧಾರೆ, ನಿಷ್ಠುರವಾದ ಮಾತು, ಖಚಿತವಾದ ನಿಲುವಿನ, ಗಂಭೀರವಾದ ವ್ಯಕ್ತಿತ್ವದ ಇವರು ನಿರ್ದೇಶಿಸಿದ ಪ್ರಮುಖ ನಾಟಕಗಳು ‘ತಾಯಿ’, ‘ಕತ್ತಲೆ ದಾರಿ ದೂರ’, ‘ಗ್ರಾಮಚಾವಡಿ’, ‘ಬಸ್ತಿ’, ‘ನೆಮ್ಮದಿ ಅಪಾರ್ಟ್ಮೆಂಟ್’, ‘ಜ್ಯೂಲಿಯಸ್ ಸೀಝರ್’, ‘ದಂಗೆಯ ಮುಂಚಿನ ದಿನಗಳು’ ಹಾಗೂ ‘ಸಂಪಿಗೆ ನಗರ ಪೋಲೀಸ್ ಸ್ಟೇಶನ್’.’ಕರ್ನಾಟಕ ಬೀದಿ ನಾಟಕ ಅಕಾಡೆಮಿ’ ನೀಡುವ ಈ ಪುರಸ್ಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾದುವ ಕೊಲೇಜ್ ಆಫ್ ಕೊಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಇದರ ನಾಟಕ ತಂಡವಾದ ‘ಪಾದುವ ರಂಗ ಅಧ್ಯಯನ ಕೇಂದ್ರ, ಅಸ್ತಿತ್ವ(ರಿ.) ಮಂಗಳೂರು ಹಾಗೂ ಅರೆಹೊಳೆ ಪ್ರತಿಷ್ಠಾನ ಇವರು ಜಂಟಿಯಾಗಿ ಪುರಸ್ಕ್ರತರಿಗೆ ನೀಡುತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ3 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ5 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ3 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ3 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ3 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ3 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ