ದಿನದ ಸುದ್ದಿ

ಇದೇ 28ರಂದು ಛಲವಾದಿ ಮಹಾಸಭಾದಿಂದ ‘ಪ್ರತಿಭಾ ಪುರಸ್ಕಾರ’

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಛಲವಾದಿ ಮಹಾಸಭಾ ಸಮಾಜದ ವತಿಯಿಂದ ಎಸ್.ಎಸ್.ಎಲ್.ಸಿ.ಯಲ್ಲಿ 75ಕ್ಕೂ ಹೆಚ್ಚು ಅಂಕ ಪಡೆದ ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ 80ಕ್ಕೂ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವನ್ನು ಇದೇ 28 ರಂದು ಭಾನುವಾರ ಬೆಳಿಗ್ಗೆ ಬಾಪೂಜಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿರುವ ಎಸ್. ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಶ್ರೀಶ್ರೀಶ್ರೀ ಜ್ಞಾನ ಪ್ರಕಾಶ ಸ್ವಾಮಿಜಿಯವರ ದಿವ್ಯ ಸಾನಿಧ್ಯವಿರಲಿದ್ದು, ಗೃಹ ಸಚಿವ ಡಾ॥ ಜಿ. ಪರಮೇಶ್ವರ್‌ರವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ದಾವಣಗೆರೆ ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷರಾದ ಎನ್. ರುದ್ರಮುನಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಲಿದ್ದಾರೆ.

ಸಂಸದೆ ಡಾ॥ ಪ್ರಭಾ ಮಲ್ಲಿಕಾರ್ಜುನ, ಸಚಿವ ಡಾ॥ ಹೆಚ್.ಸಿ. ಮಹಾದೇವಪ್ಪನ, ಸಚಿವ ಎಸ್.ಎಸ್. ಮಲ್ಲಿಕಾರ್ಜುನರವರು, ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಶಾಸಕ ನೆಹರು. ಚ. ಓಲೇಕಾರ್, ಎಂಎಲ್ ಸಿ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಇತರ ಗಣ್ಯರು ಕಾರ್ಯಕಮದಲ್ಲಿ ಭಾಗವಹಿಸಲಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version