ದಿನದ ಸುದ್ದಿ
ಇಂದು ಸಂಭವಿಸುವ ಚಂದ್ರಗ್ರಹಣದ ಕುರಿತು ಮಾಹಿತಿ
ಸುದ್ದಿದಿನ ಡೆಸ್ಕ್ : ನ.8ರಂದು ಚಂದ್ರಗ್ರಹಣವು ಸಂಭವಿಸಲಿದ್ದು, ಇದು ಈ ವರ್ಷದ ಕೊನೆಯ ಚಂದ್ರಗ್ರಹಣವಾಗಿದೆ. ಉತ್ತರ ಅಮೇರಿಕಾದ ಪಶ್ಚಿಮ ಭಾಗ, ಪೂರ್ವ ರಷ್ಯಾ, ಜಪಾನ್ ಮತ್ತು ನ್ಯೂಜಿಲ್ಯಾಂಡ್ ಗಳಲ್ಲಿ ಪೂರ್ಣ ಪ್ರಮಾಣದ ಚಂದ್ರಗ್ರಹಣವು ಗೋಚರಿಸಲಿದೆ ಮತ್ತು ಭಾರತದ ಪೂರ್ವ ಭಾಗದಲ್ಲಿನ ಅಗರ್ತಲಾ, ಭುವನೇಶ್ವರ್, ಡಾರ್ಜಿಲಿಂಗ್, ಗುವಾಹಟಿ, ಪೋರ್ಟ್ ಬ್ಲೇರ್ ಮುಂತಾದ ಪ್ರದೇಶಗಳಲ್ಲಿಯೂ ಪೂರ್ಣ ಪ್ರಮಾಣದ ಚಂದ್ರಗ್ರಹಣವು ಗೋಚರಿಸಲಿದೆ ಎಂದು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಶಿಕ್ಷಣ ಸಹಾಯಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243