ದಿನದ ಸುದ್ದಿ
ಚಂದ್ರಯಾನ-3 | ಇಸ್ರೋದಲ್ಲಿ ದೇಶದ ಸಾವಿರ ವಿಜ್ಞಾನಿಗಳ ಪೈಕಿ ರಾಜ್ಯದ 500 ಮಂದಿ ವಿಜ್ಞಾನಿಗಳ ಶ್ರಮ ; ರಾಜ್ಯ ಸರ್ಕಾರದಿಂದ ಸನ್ಮಾನ
ಸುದ್ದಿದಿನ, ಬೆಂಗಳೂರು : ಚಂದ್ರಯಾನ-3 ಯಶಸ್ಸಿಗೆ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಕರ್ನಾಟಕ ಸರ್ಕಾರ ಗೌರವಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಇಸ್ರೋ ಇಸ್ಟ್ರ್ಯಾಕ್ ಕೇಂದ್ರಕ್ಕೆ ಅವರು ಭೇಟಿ ನೀಡಿ, ಯೋಜನೆಯ ಯಶಸ್ಸಿಗೆ ಶ್ರಮಿಸಿದ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ವಿಜ್ಞಾನಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿ ಈ ವಿಷಯ ತಿಳಿಸಿದರು.
ಚಂದ್ರಯಾನ-3ರ ಕಾರ್ಯಾಚರಣೆ ಬಗ್ಗೆ ವಿಜ್ಞಾನಿಗಳಿಂದ ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡರು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತದ ಹಲವು ವರ್ಷಗಳ ಕನಸು ನನಸಾಗಿದೆ. ದೇಶದ ಸುಮಾರು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದು, ಈ ಪೈಕಿ ರಾಜ್ಯದ 500 ಮಂದಿ ಸೇರಿದ್ದಾರೆ ಎಂದು ತಿಳಿಸಿದರು.
ಚಂದ್ರಯಾನ – 3ರ ಪ್ರಜ್ಞಾನ್ ರೋವರ್ ಚಂದ್ರನ ಮೇಲ್ಮೈಯಲ್ಲಿ ಸಂಚಾರ ಆರಂಭಿಸಿದೆ. ಲ್ಯಾಂಡರ್‌ನಿಂದ ಹೊರಗಿಳಿದು ರೋವರ್ ಚಂದ್ರನ ಮೇಲೆ ಸಂಚರಿಸಿರುವುದು ಮಹತ್ವದ ಹೆಜ್ಜೆಯಾಗಿದೆ ಎಂದು ಇಸ್ರೋ ಹೇಳಿದೆ.
ಹೀಗೆ ರೋವರ್ ಚಂದ್ರನ ಮೇಲೆ ಉರುಳುತ್ತಾ ಭಾರತದ ತ್ರಿವರ್ಣ ಧ್ವಜ ಮತ್ತು ಇಸ್ರೋದ ಲೋಗೋವನ್ನು ಚಂದ್ರನ ಮೇಲೆ ಅಚ್ಚಿಳಿಸಿದ್ದು, ಭಾರತ ದಕ್ಷಿಣ ಧ್ರುವದಲ್ಲಿ ನೆಲೆ ನಿಂತ ಮೊದಲ ದೇಶ ಎಂಬ ಹೆಗ್ಗಳಿಕೆಯನ್ನು ಸಾರಿದೆ ಎಂದು ಇಸ್ರೋ ಹೇಳಿದೆ.
ಚಂದ್ರಯಾನದ ಯಶಸ್ಸಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಭಾರತವನ್ನು ಅಭಿನಂದಿಸಿದ್ದಾರೆ. ಚಂದ್ರಯಾನ- 3 ನೌಕೆಯನ್ನು ಸುರಕ್ಷಿತವಾಗಿ ಇಳಿಸಿದ ಭಾರತದ ಸಾಧನೆಗೆ ಯುಎಇ ಅಧ್ಯಕ್ಷ ಶೇಖ್ ಮೊಹಮದ್ ಬಿನ್ ಝೈಯದ್ ಅಭಿನಂದನೆ ತಿಳಿಸಿದ್ದಾರೆ.
ಇವರು ಚಂದ್ರಯಾನ-3 ಯೋಜನೆಯ ಯಶಸ್ಸಿನ ಹಿಂದಿರುವ ಶಕ್ತಿಗಳು. ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರದ ಮೇಲೆ ಇಳಿದ ಕ್ಷಣದಿಂದ ಇಡೀ ವಿಶ್ವವೇ ಇವರ ಸಾಧನೆಯನ್ನು ಕೊಂಡಾಡುತ್ತಿದೆ.
ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಇಂದು ಭೇಟಿನೀಡಿ ಇಂಥದ್ದೊಂದು ಅಸಾಧಾರಣ ಸವಾಲನ್ನು ಸಾಧ್ಯವಾಗಿಸಿ ಐತಿಹಾಸಿಕ ಸಾಧನೆ ಮಾಡಿದ ನಮ್ಮ ಹೆಮ್ಮೆಯ ವಿಜ್ಞಾನಿ ಮಿತ್ರರ… pic.twitter.com/SLFrSP8H9T— Siddaramaiah (@siddaramaiah) August 24, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


