ದಿನದ ಸುದ್ದಿ

ಚನ್ನಗಿರಿ | ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಬಂಧ ಹಾಗೂ ಭಾವಗೀತೆ ಗಾಯನ ಸ್ಪರ್ಧೆ

Published

on

ಸುದ್ದಿದಿನ,ಚನ್ನಗಿರಿ:ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸಲು ಸ್ಪರ್ಧೆಗಳು, ಸಾಂಸ್ಕೃತಿಕ ಚಟುವಟಿಕೆಗಳು ಉತ್ತಮವಾದ ವೇದಿಕೆಯನ್ನು ಕಲ್ಪಿಸುತ್ತವೆ ಎಂದು ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಅಮೃತೇಶ್ವರ ಬಿ.ಜಿ ಅಭಿಪ್ರಾಯಪಟ್ಟರು.

ಇಂದು ಕಾಲೇಜಿನ ಕನ್ನಡ ವಿಭಾಗ ಹಾಗೂ ಐ ಕ್ಯೂ ಎ ಸಿ ಸಹಯೋಗದಲ್ಲಿ ಇಂದು ‘ಪ್ರಬಂಧ ಸ್ಪರ್ಧೆ’ ಹಾಗೂ ‘ಭಾವಗೀತೆ ಗಾಯನ’ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಭಾವಗೀತೆ ಸ್ಪರ್ಧೆ

ಸೋಲು ಗೆಲುವುಗಳ ಲೆಕ್ಕಾಚಾರ ಮಾಡದೇ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ಸ್ಪರ್ಧೆಯಲ್ಲಿ ಭಾಗವಹಿಸಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಪ್ರಬಂಧ ಸ್ಪರ್ಧೆ

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ರವಿ,
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಈ.ಲಕ್ಷ್ಮಣ್, ತೀರ್ಪುಗಾರರಾಗಿ ಇತಿಹಾಸ ವಿಭಾಗದ ಸಹ ಪ್ರಾದ್ಯಾಪಕಿ ಡಾ.ಪಾರ್ವತಮ್ಮ, ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಪುಷ್ಪಲತಾ,ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಪ್ರಿಯಾ ಎಚ್ ಬುಟ್ಟೆ ಜವಾಬ್ದಾರಿ ನಿರ್ವಹಿಸಿದರು.
ಹಾಗೂ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಮುರುಳೀಧರ ಎಂ ಯು, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಗೋವರ್ಧನ್ ಎನ್‌.ಆರ್ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಉಪನ್ಯಾಸಕರಾದ ಡಾ.ಎಚ್ ಎಂ ಶಕೀಲ್ ಅಹಮದ್ ಕಾರ್ಯಕ್ರಮ ನಿರೂಪಿಸಿ,ಹನುಮಂತಪ್ಪ ಎ. ಸ್ವಾಗತಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version