ದಿನದ ಸುದ್ದಿ
ಚನ್ನಗಿರಿ | ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ :ಜಿಲ್ಲೆಯ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ಯಕ್ಕೆಗೊಂದಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಕರೆಯಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿವಸದೊಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸಬೇಕು. ಅವಧಿಯ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿ ಪ್ರಕಟಿಸಿರುವ ಯಕ್ಕೆಗೊಂದಿ ಮತ್ತು ಕೊಮಾರನಹಳ್ಳಿ ಗ್ರಾಮದಲ್ಲಿ 25-ಅಂತ್ಯೋದಯ, 297-ಬಿಪಿಎಲ್(ಅಕ್ಷಯ), ಎಪಿಎಲ್-2. ಒಟ್ಟು 324 ಪಡಿತರ ಚೀಟಿಗಳನ್ನು ನಿಯೋಜಿಸಿದ್ದು, ಈ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಅವಶ್ಯವಿರುವ ಬ್ಯಾಂಕ್ ಠೇವಣಿ ಒಂದು ತಿಂಗಳಿಗೆ ಪಡಿತರ ಮೊತ್ತ ಕನಿಷ್ಠ ರೂ. 50,000 ಇರುತ್ತದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು/ಸಂಸ್ಥೆಗಳು/ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪಾನ್ನ ಸಹಕಾರ ಸಂಘ/ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪನ್ನಗಳಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು.
ಇದನ್ನೂ ಓದಿ | ದಾವಣಗೆರೆ | ಅನರ್ಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತರಾಗಿ ಬಿಪಿಎಲ್ ಪಡಿತರ ಚೀಟಿ ಅಧ್ಯರ್ಪಿಸಲು ಡಿಸಿ ಸೂಚನೆ
ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿದೋದ್ದೇಶ ಸಹಕಾರ ಸಂಘ, ನೊಂದಾಯಿತ ನೇಕಾರರ ಮತ್ತು ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್( ಸಹಕಾರ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೊಂದಾಯಿತವಾಗಿರಬೇಕು. ಕನಿಷ್ಠ ಎರಡು ಲಕ್ಷ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು) ಹಾಗೂ ವಿಕಲಚೇತನರು (ಸರ್ಕಾರ ನಿಯಮಾನುಸಾರ), ತೃತೀಯ ಲಿಂಗಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಜಂಟಿ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಾವಣಗೆರೆ ಇವರಿಗೆ ಸಲ್ಲಿಸತಕ್ಕದ್ದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿ ಅಥವಾ ತಹಶೀಲ್ದಾರ್, ಚನ್ನಗಿರಿ ತಾಲ್ಲೂಕು ಕಚೇರಿಯಿಂದ ಪಡೆಯಬಹುದು. ಖಾಸಗಿ ವ್ಯಕ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು: ಅರ್ಜಿ ನಮೂನೆ ‘ಎ’, ಸಹಕಾರ ಸಂಘ/ಸಂಸ್ಥೆಗಳ ಮತ್ತು ಸ್ವಸಹಾಯ ಸಂಘಗಳಾದರೆ ನೋದಾವಣೆ ಪತ್ರ, ಕಳೆದ 3 ವರ್ಷಗಳ ದೃಡಿಕರಣ ಲೆಕ್ಕ ಪರಿಶೋಧನಾ ವರದಿ ಮತ್ತು ಉಪನಿಯಮಗಳು(ಬೈಲಾ), ನ್ಯಾಯಬೆಲೆ ಅಂಗಡಿ ನಡೆಸಲು ಮತ್ತು ಪ್ರಮಾಣ ಪತ್ರ ಸಲ್ಲಿಸಲು ಅಧಿಕಾರ ಪಡೆದಿರುವ ಪ್ರತಿನಿಧಿಯನ್ನು ನೇಮಿಸಿರುವ ಬಗ್ಗೆ ನಿರ್ಣಯ, ಕರ್ನಾಟಕ ಸೊಸೈಟೀಸ್ ರಿಜೀಸ್ಟ್ರೇಷನ್ ಆಕ್ಟ್ 1959 ಅಡಿ ವಿಚಾರಣೆ, ಟ್ರಯಲ್ ಮತ್ತು ಲಿಕ್ವಿಡೇಷನ್ ನಡವಳಿ ನಡೆದಿರುವುದಿಲ್ಲ ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಡೀಕರಣ ಪತ್ರ, ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ/ಕರಾರು ಪತ್ರ, ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ,
ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ನ್ಯಾಯಬೆಲೆ ಅಂಗಡಿ ಮಂಜೂರು ಮಾಡುವಾಗ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ(ನಿಯಂತ್ರಣ) ಆದೇಶ 2018 ರಲ್ಲಿ ಆದ್ಯತೆಗಳನ್ನು ಪರಿಗಣಿಸಲಾಗುವುದು ಎಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್‍ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
