ದಿನದ ಸುದ್ದಿ

ಚನ್ನಗಿರಿ | ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ(ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ತಣಿಗೆರೆ, ಹೆಬ್ಬಳಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ಮಾಸಿಕ ರೂ.6,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 45 ವಯೋಮಾನದೊಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾದ ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಏ.09 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಯಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ | 6397 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ತುಮಕೂರು-ಶಿವಮೊಗ್ಗ ಚತುಷ್ಪಥ ಹೆದ್ದಾರಿ ತ್ವರಿತವಾಗಿ ಪೂರ್ಣ: ಸಂಸದ ಬಿ.ವೈ.ರಾಘವೇಂದ್ರ

ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್ ದಾವಣಗೆರೆ ದೂರವಾಣಿ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version