ದಿನದ ಸುದ್ದಿ

ಚನ್ನಗಿರಿ | ಯರಗಟ್ಟಿಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳಿಂದ ಕಲಿಕಾ ಸಾಮಗ್ರಿ ವಿತರಣೆ

Published

on

ಸುದ್ದಿದಿನ, ಚನ್ನಗಿರಿ : ತಾಲೂಕಿನ ಯರಗಟ್ಟಿಹಳ್ಳಿಯ‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಮಕ್ಕಳಿಗೆ ಉಚಿತವಾಗಿ 50ಸಾವಿರ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.

50 ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ ಇನ್ನಿತರೆ ಕಲಿಕಾ ಸಾಮಗ್ರಿಗಳನ್ನು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿತರಿಸಿದರು. ಜತೆಗೆ ಪೋಷಕರ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಎಸ್ ಡಿ ಎಂ ಸಿ ಅಧ್ಯಕ್ಷರು, ಗ್ರಾಮಸ್ಥರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version