ದಿನದ ಸುದ್ದಿ
ಚನ್ನಗಿರಿಯಲ್ಲಿ ಕೊರೊನಾಗೆ ಮೊದಲ ಬಲಿ..!
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ, ಚನ್ನಗಿರಿ ತಾಲೂಕಿನ ಕುಂಬಾರ ಬೀದಿಯ ನಿವಾಸಿ 56 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಜೂ16ರಂದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತದ ನಂತರ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಕೊರೊನಾ ಸೋಂಕಿನಿಂದ ಮೃತಪಟ್ಟ ತಾಲ್ಲೂಕಿನ ಮೊದಲ ಮಹಿಳೆ ಇವರಾಗಿದ್ದಾರೆ. ಈ ಪ್ರದೇಶದಲ್ಲಿ 28 ದಿನ ಸೀಲ್‌ಡೌನ್ ಇರುತ್ತದೆ ಎಂದು ತಹಶೀಲ್ದಾರ್ ಪುಟ್ಟರಾಜಗೌಡ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243