ದಿನದ ಸುದ್ದಿ

ಗಿಡ ನೆಡೋಣ ; ಪೋಷಣೆಯನ್ನೂ ಮಾಡೋಣ : ಪ್ರಾಂಶುಪಾಲ ಪ್ರೊ.ಬಿ.ಜಿ.ಅಮೃತೇಶ್ವರ

Published

on

ಸುದ್ದಿದಿನ, ಚನ್ನಗಿರಿ : ಪರಿಸರ ದಿನಾಚರಣೆ ದಿನ ಗಿಡ ನೆಡುವುದು ಮುಖ್ಯವಲ್ಲ, ಜೊತೆಗೆ ಗಿಡಗಳನ್ನು ಪೋಷಣೆ ಮಾಡುವುದು ಮುಖ್ಯ ಈ ನಿಟ್ಟಿನಲ್ಲಿ ನಾವು ಗಿಡ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಪ್ರಾಂಶುಪಾಲರಾದ ಪ್ರೊ.ಅಮೃತೇಶ್ವರ ಬಿ.ಜಿ ಹೇಳಿದರು.

ಬುಧವಾರ ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಎನ್ ಎಸ್ ಎಸ್ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಗಿಡ ಬೆಳೆಸಿ, ಉಳಿಸುವ ಮೂಲಕ ಆರೋಗ್ಯ ಕಾಪಾಡುವ ಕೆಲಸ ಮಾಡಬೇಕು. ಮನುಷ್ಯರು ಆಮ್ಲಜನಕ ತೆಗೆದುಕೊಂಡು ಇಂಗಾಲದ ಡೈ ಆಕ್ಸೈಡ್ ಬಿಡುತ್ತಾರೆ. ಆದರೆ ಸಸಿಗಳು ಇಂಗಾಲದ ಡೈ ಆಕ್ಸೈಡ್ ತೆಗೆದುಕೊಂಡು ಆಮ್ಲಜನಕ ನೀಡುತ್ತದೆ. ನಾವೆಲ್ಲರೂ ಜೀವಿಸಲು ಹಾಗೂ ಉಸಿರಾಡಲು ಪರಿಸರ ಮುಖ್ಯ, ಪರಿಸರ ಇದ್ದಷ್ಟು ಆರೋಗ್ಯ ಹೆಚ್ಚಾಗುತ್ತದೆ. ಒಂದು ವೇಳೆ ಪರಿಸರ ಕ್ಷೀಣಿಸಿದರೆ ಭೂಮಿ ಮೇಲಿನ ಜೀವಿಗಳು ನಾಶ ಹೊಂದುತ್ತವೆ. ಜೊತೆಗೆ ಉಸಿರಾಟದ ತೊಂದರೆ ಉಂಟಾಗುತ್ತದೆ ಎಂದರು.

ವಾಹನಗಳ ಹೊಗೆಯಿಂದ ಹಾಗೂ ಬೇರೆ ಬೇರೆ ಮಾಲಿನ್ಯದಿಂದ ಇಂದು ಪರಿಸರದ ವಾತಾವರಣ ಹದಗೆಡುತ್ತಿದೆ. ವಾಹನಗಳ ಓಡಾಟದಿಂದ ಪರಿಸರದ ವಾತಾವರಣದಲ್ಲಿ ವ್ಯತ್ಯಾಸವಾಗುವುದು ಇದರಿಂದ ಕಂಡುಬಂದಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊ. ವಿಜಯ್ ಕುಮಾರ್ ಐ ಕ್ಯೂ ಎ ಸಿ ಸಂಚಾಲಕರು, ಡಾ.ಸತೀಶ್ ಕುಮಾರ್, ಡಾ. ಪಾರ್ವತಮ್ಮ, ಅರಣ್ಯ ಇಲಾಖೆಯ ಸಿಬ್ಬಂದಿ, ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version