ದಿನದ ಸುದ್ದಿ
ಚನ್ನಗಿರಿ | ಮಹಿಳಾ ವಿ.ಆರ್.ಪಿ.ಗಳಿಗೆ ಎರಡು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟನೆ
ಸುದ್ದಿದಿನ, ಚನ್ನಗಿರಿ : ಪಟ್ಟಣದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ‘ಮಹಿಳಾ ವಿ.ಆರ್.ಪಿ.ಗಳಿಗೆ ಎರಡು ದಿನದ ತರಬೇತಿ ಕಾರ್ಯಕ್ರಮ’ ವನ್ನು ಮಂಗಳವಾರ ಪ್ರಾರಂಭಿಸಲಾಯಿತು.
ಕಾರ್ಯಕ್ರಮಕ್ಕೆ ಶ್ರೀ ಈಶ್ವರ್ ಸಹಾಯಕ ನಿರ್ದೇಶಕರು(ಗ್ರಾ.ಉ) , ಶ್ರೀ ವಿಶ್ವನಾಥ್ (ನಿವೃತ್ತ ತಾಲ್ಲೂಕು ಸಂಯೋಜಕರು)ಕೊಟ್ರೇ. ತಾಲ್ಲೂಕು ಸಂಯೋಜಕರು ಸಾಮಾಜಿಕ ಪರಿಶೋಧನೆ, ಶ್ರೀ ವಿಜಯಕುಮಾರ್ ಎನ್.ಆರ್.ಎಲ್.ಎಂ. ಸಂಯೋಜಕರು, ಚನ್ನಗಿರಿ ತಾಲ್ಲೂಕು. ಹಾಗೂ ಹಿಂದಿನ ವಿ.ಆರ್.ಪಿ.ಗಳು ಶಿಭಿರಾರ್ಥಿಗಳಿಗೆ ತರಬೇತಿಯ ಕೈಪಿಡಿ, ಬುಕ್, ಪೆನ್ನು, ನರೇಗಾ ಯೋಜನೆಯ ಕರಪತ್ರಗಳು, ಪಾಕೇಟ್ ಕ್ಯಾಲೆಂಡರ್ ಗಳನ್ನು ನೀಡಲಾಯಿತು.
ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟನಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
ಶ್ರೀ ಎಂ.ಆರ್.ಪ್ರಕಾಶ್ ಕಾರ್ಯನಿರ್ವಾಹಕ ಅಧಿಕಾರಿಗಳು ಗಿಡಕ್ಕೆ ನೀರು ಬಿಡುವುದರ ಮೂಲಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಇ.ಒ.ರವರು ತರಬೇತಿಯ ಕುರಿತು ಇ.ಒ.ರವರು ಪ್ರಾಸ್ತಾವಿಕ ನುಡಿ ಮಾತನಾಡಿದರು. ಶ್ರೀ ಜಯಪ್ರಕಾಶ್. ಬಿ . ಜಿಲ್ಲಾ ಸಂಯೋಜಕರು, ಸಾಮಾಜಿಕ ಪರಿಶೋಧನೆ, ಜಿ.ಪಂ. ದಾವಣಗೆರೆ.ಇವರು ತರಬೇತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಶಿಭಿರಾರ್ಥಿಗಳಿಗೆ ತಿಳಿಸಿದರು.
ಗ್ರಾಮ ಸಂಪನ್ಮೂಲ ವ್ಯಕ್ತಿ
ಪ್ರತಿ ಗ್ರಾಮ ಪಂಚಾಯತಿಯಲ್ಲಿ ಒಂದು ಸ್ವಸಹಾಯ ಗುಂಪಿನಿಂದ ಒಬ್ಬ ಮಹಿಳೆಯನ್ನು ಆಯ್ಕೆಮಾಡಿ ಸಾಮಾಜಿಕ ಪರಿಶೋಧನಾ ವಿಭಾಗದಲ್ಲಿ ಗ್ರಾಮ ಸಂಪನ್ಮೂಲ ವ್ಯಕ್ತಿಗಳನ್ನಾಗಿ ಗುರುತಿಸಲಾಗಿದೆ. ಇವರುಗಳು ಆಯಾ ಗ್ರಾ.ಪಂ.ಗಳಲ್ಲಿ ಯೋಜನೆಗಳ ಕಾರ್ಯ ನಿರ್ವಹಣೆ ಮತ್ತು ಗುಣಮಟ್ಟದ ಕುರಿತು ಸಾಮಾಜಿಕ ಪರಿಶೋಧನೆ ನಡೆಸಲು ತರಬೇತಿಯನ್ನು ನೀಡಲು ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅದೇಶದಂತೆ, ಜಿಲ್ಲಾ ಪಂಚಾಯತ್ ದಾವಣಗೆರೆ ಹಾಗೂ ತಾಲ್ಲೂಕು ಪಂಚಾಯಿತಿ ಚನ್ನಗಿರಿ ಸಹಯೋಗದೊಂದಿಗೆ ತರಬೇತಿ ನಡೆಸಲಾಯಿತು. ಇಂದು ಪ್ರತಿ ತಾಲ್ಲೂಕಿನಲ್ಲಿ ಇದೇ ರೀತಿಯ ಕಾರ್ಯಕ್ರಮ ಆಯೋಜಿಸಲಾಗಿರುತ್ತೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.
ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.
ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು
-
ದಿನದ ಸುದ್ದಿ7 days agoದಾವಣಗೆರೆ | ದೇಗುಲಗಳಲ್ಲಿ ನಿಧಿ ಶೋಧನೆ ಯತ್ನ ; ಆರು ಜನರ ಬಂಧನ
-
ದಿನದ ಸುದ್ದಿ3 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ2 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ಕ್ರೀಡೆ2 days agoಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

