ದಿನದ ಸುದ್ದಿ

ಚನ್ನಗಿರಿ | ಇದೇ 15 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮೇ.15 ರಂದು ಚನ್ನಗಿರಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತು ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಮೇ.15 ರಂದು ಚನ್ನಗಿರಿ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೆÇಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version