ದಿನದ ಸುದ್ದಿ
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
ಸುದ್ದಿದಿನ,ಚನ್ನಗಿರಿ:ಇತ್ತೀಚಿಗೆ ತಾವರೆಕೆರೆಯಲ್ಲಿ ನಡೆದ ಘಟನೆ ಕಾನೂನು ಬಾಹಿರವಾಗಿದ್ದು, ಮುಖಂಡರುಗಳು ತಮ್ಮ ಗ್ರಾಮ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಯಾವುದೇ ಘಟನೆ ನಡೆದಿದ್ದರೆ ಕಾನೂನಿನ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕೇ ವಿನಃ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ ನೀಡಿದರು.
ತಾವರೆಕೆರೆ ಗ್ರಾಮದಲ್ಲಿ ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಚಿತ್ರ ಹರಿದಾಡುತ್ತಿರುವ ವಿಚಾರವಾಗಿ ಚನ್ನಗಿರಿ ಪೊಲೀಸ್ ಠಾಣೆ ಹಾಗೂ ಸಂತೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಟೌನ್ ಹಾಗೂ ಗ್ರಾಮಗಳ ಮುಸ್ಲೀಂ ಮುಖಂಡರುಗಳನ್ನು ಉದ್ದೇಶಿಸಿ ಗುರುವಾರ (ಏ.17ರಂದು) ಪಟ್ಟಣದ ತಾಲ್ಲೂಕು ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆವಹಿಸಿ ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಅವರು ಮಾತನಾಡಿದರು.
ಇದನ್ನೂ ಓದಿ :
ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೇ 112 ಗೆ ಕರೆ ಮಾಡಿ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಧರ್ಮದ ಬಗ್ಗೆ / ವ್ಯಕ್ತಿಗಳ ಬಗ್ಗೆ ಪ್ರಚೋಧನಕಾರಿ ಹೇಳಿಕೆಗಳಾಗಲಿ, ಭಾಷಣವನ್ನಾಗಲಿ ಪೋಸ್ಟ್ ಮಾಡದಂತೆ ಸೂಕ್ತ ತಿಳುವಳಿಕೆ ನೀಡಿರುತ್ತಾರೆ, ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾರು ಸಹಕಾರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಚನ್ನಗಿರಿ ಪೊಲೀಸ್ ಠಾಣೆ, ಪೊಲೀಸ್ ನಿರೀಕ್ಷಕರಾದ ಶ್ರೀ ರವೀಶ್, ಸಂತೇಬೆನ್ನೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಲಿಂಗನಗೌಡ ನೆಗಳೂರು ರವರು, ಸರ್ದಾರ್ ಅಹಮ್ಮದ್, ಪುರಸಭೆ ಸದಸ್ಯರಾದ ಗೌಸ್ ಪೀರ್, ತನ್ವೀರ್, ನಲ್ಲೂರು ತಾಲ್ಲೂಕು ಪಂಚಾಯ್ತಿಯ ಮಾಜಿ ಸದಸ್ಯರಾದ ಉಸ್ಮಾನ್ ಷರೀಪ್, ಚನ್ನಗಿರಿ ತಾಲ್ಲೂಕು ಮುಸ್ಲೀಂ ಸಮಾಜದ ಅಧ್ಯಕ್ಷ ಹೊನ್ನೆಬಾಗಿ ಜಬೀವುಲ್ಲಾ ಸೇರಿದಂತೆ ಚನ್ನಗಿರಿ/ಸಂತೇಬೆನ್ನೂರು ಠಾಣಾ ವ್ಯಾಪ್ತಿಯ ಚನ್ನಗಿರಿ ಟೌನ್, ಅಗರಬನ್ನಿಹಟ್ಟಿ, ನಲ್ಲೂರು, ಹೊನ್ನೇಬಾಗಿ, ತಾವರಕೆರೆ, ಸಂತೇಬೆನ್ನೂರು, ಕೆರೆಬಿಳಚಿ ಸೇರಿದಂತೆ ಇತರೆ ಗ್ರಾಮಗಳ ಮುಸ್ಲಿಂ ಮುಖಂಡರುಗಳು ಮತ್ತು ಮಸೀದಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243