Connect with us

ದಿನದ ಸುದ್ದಿ

ವಿಡಿಯೊ | ಚನ್ನಗಿರಿ ‌: ಶಾಸಕ ಮಾಡಾಳು ವಿರೂಪಾಕ್ಷಪ್ಪರಿಂದ ಕೋಗಲೂರು ಗ್ರಾಮದಲ್ಲಿ ಅಹಾರ ಕಿಟ್ಟುಗಳ ವಿತರಣೆ

Published

on

ಸುದ್ದಿದಿನ,ಚನ್ನಗಿರಿ : ತಾಲೂಕಿನ ಹಿರೇ ಕೋಗಲೂರು ಗ್ರಾಪಂ‌ ವ್ಯಾಪ್ತಿಯ, ಗಿರಿಯಾಪುರ , ಚಿಕ್ಕ ಕೋಗಲೂರು ‌ಗ್ರಾಮಗಳ ಬಡವವರಿಗೆ 500 ಆಹಾರ ಕಿಟ್ಟುಗಳನ್ನು ಶಾಸಕರಾದ ಮಾಡಾಳು‌ ವಿರೂಪಾಕ್ಷಪ್ಪ ಅವರು ಶುಕ್ರವಾರ ವಿತರಿಸಿದರು.

ಆಹಾರದ ಕಿಟ್ಟುಗಳನ್ನು ವಿತರಿಸಿ ಮಾತನಾಡಿದ‌ ಅವರು, ತಾಲೂಕಿನದ್ಯಾಂತ ಪ್ರತಿ‌ ಗ್ರಾಮಗಳಿಗೆ ಬೇಟಿ ಮಾಡಿ ಗ್ರಾಮದ ಮುಖಂಡರುಗಳು ಆಯ್ಕೆ ಮಾಡಿದಂತಹ ಬಡವರಿಗಾಗಿ ಲಕ್ಷಾಂತರ ಅಹಾರ ಕಿಟ್ಟುಗಳನ್ನು ವಿತರಣೆ ಮಾಡುತಿದ್ದೇವೆ ಎಂದರು.

ಲಾಕ್ಡೌನ್ ನಿಂದಾಗಿ ಕೂಲಿ ಕೆಲಸವಿಲ್ಲದೆ ಮನೆಯಲ್ಲಿರುವಂತಹ ಕಾರ್ಮಿಕರು ಮತ್ತು ಬಡವರಿಗಾಗಿ ಅಹಾರ ಕಿಟ್ಟುಗಳ ಖರೀದಿಗಾಗಿ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸಿ ಮತ್ತು ‌ಶಾಸಕರ ಅನುಧಾನವನ್ನು‌ ಬಳಸಿಕೊಂಡು ಕಿಟ್ಟುಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.

ಆದ್ದರಿಂದ ನೀವುಗಳು‌ ಮನೆಯಲ್ಲಿಯೇ ಇರಬೇಕು ಸರ್ಕಾರ‌ದ‌ ನಿಯಮಗಳನ್ನಾ ತಪ್ಪದೆ ಪಾಲಿಸಬೇಕು ಸರ್ಕಾರ ನಿಮ್ಮೊಂದಿಗೆ ಇದೆ ಅತ್ಮಸ್ಥೈರ್ಯ ಕಳೆದು ಕೊಳ್ಳಬಾರದು ಮಹಾಮಾರಿ ಕೊರೋನ‌ ರೋಗವನ್ನು ದೇಶದಿಂದ ಓಡಿಸಬೇಕೆಂದರೆ ತಾವುಗಳು ಮನೆಯಲ್ಲಿಯೇ ಇರಬೇಕು ಎಂದು ಮನವಿ ಮಾಡಿದರು.

ಈ‌ ಸಂದರ್ಭದಲ್ಲಿ ತಹಸೀಲ್ದಾರ್ ಗಿರೀಶ್ , ತಾಪಂ ಕಾರ್ಯನಿರ್ವಾಹಣಾಧಿಕಾರಿಯಾದ ಪ್ರಕಾಶ್ , ವೃತ್ತ ನಿರೀಕ್ಷಕರಾದ ಆರ್ ಆರ್ ಪಾಟೀಲ್ , ಸಂತೇಬೆನ್ನೂರು ಪಿಎಸ್ಐ ಶಿವರುದ್ರಪ್ಪ ಎಸ್ ಮೇಟಿ , ಹೆಚ್ ಯು ಮಲ್ಲಿಕಾರ್ಜುನ , ಜಗದೀಶ್ ಗೌಡ , ಶರಣಪ್ಪ ಎಸ್ ಬಿ ಗ್ರಾಪಂ ಅಧ್ಯಕ್ಷರಾದ ಅನುಭಾಗ್ಯಮ್ಮ , ಉಪಾಧ್ಯಕ್ಷರಾದ ಶಂಕರಮ್ಮ , ಚಿದಾನಂದಯ್ಯ , ಸುನಿಲ್ , ರಾಜಶೇಖರಪ್ಪ ಉಪಸ್ಥಿತರಿದ್ದರು.

ವಿಡಿಯೋ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ

https://youtu.be/12Op3C5CggA

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಜೋಗ ಜಲಪಾತ ವೀಕ್ಷಣೆಗೆ ವಿಶೇಷ ಸಾರಿಗೆ ಬಸ್

Published

on

ಸುದ್ದಿದಿನ,ದಾವಣಗೆರೆ : ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಸಾರ್ವಜನಿಕರು ವೀಕ್ಷಿಸುವಂತಾಗಲು ದಾವಣಗೆರೆ ವಿಭಾಗದ ದಾವಣಗೆರೆ ಮತ್ತು ಹರಿಹರದಿಂದ ಜೋಗ್‍ಫಾಲ್ಸ್‍ಗೆ ರಾಜಹಂಸ ಸಾರಿಗೆ ವಿಶೇಷ ಪ್ಯಾಕೇಜ್ ಸೇವೆ ಆ. 01 ರಿಂದ ವಾರದ ಎಲ್ಲಾ ದಿನಗಳಂದು ಇರುತ್ತದೆ.

ಭಾನುವರದಂದು ಮಾತ್ರ ಈ ಸೇವೆ ಪ್ರಾರಂಭಿಸಲಾಗಿತ್ತು. ಆಧರೆ ಈ ಪ್ಯಾಕೇಜ್ ಪ್ರಯಾಣಕ್ಕೆ ಸಾರ್ವಜನಿಕ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಬಂದ ಕಾರಣ ಆ.01 ರಿಂದ ವಾರದ ಎಲ್ಲಾ ದಿನಗಳಂದು ಬಸ್ ಕಾರ್ಯಚರಣೆ ನಡೆಸಲು ಉದ್ದೇಶಿಸಲಾಗಿದೆ.

ದಾವಣಗೆರೆಯಿಂದ ಬೆಳಿಗ್ಗೆ 07 ಕ್ಕೆ ಹೊರಟು, ಹರಿಹರ 7-30, ಶಿರಸಿ- ಬೆ. 10.30 ಕ್ಕೆ ತಲುಪುತ್ತದೆ. 12 ಕ್ಕೆ ಶಿರಸಿಯಿಂದ ಹೊರಟು ಮಧ್ಯಾಹ್ನ 1.30 ಕ್ಕೆ ಜೋಗವನ್ನು ತಲುಪುತ್ತದೆ. ಸಂಜೆ 4.30 ಕ್ಕೆ ಜೋಗದಿಂದ ಹೊರಟು ರಾತ್ರಿ 8 ಗಂಟೆಗೆ ದಾವಣಗೆರೆಯನ್ನು ತಲುಪುತ್ತದೆ. ಪ್ರಯಾಣ ದರ ರೂ 500 (ಹೋಗಿ ಬರುವ 2 ಬದಿ ಸೇರಿ) ಮಕ್ಕಳಿಗೆ ರೂ.375 (2 ಬದಿಯಿಂದ) ಹರಿಹರದಿಂದ ಹೊರಡುವ ಪ್ರಯಾಣಿಕರಿಗೆ ದರ ರೂ. 475 (2 ಬದಿ) ಮಕ್ಕಳಿಗೆ ರೂ 350 ಆಗಿರುತ್ತದೆ.

ಮುಂಗಡ ಬುಕ್ಕಿಂಗ್ ಕೌಂಟರ್‍ಗಳಲ್ಲಿ ಬುಕ್ಕಿಂಗ್ www.ksrtc.in ಮಾಡಲು ಸೌಕರ್ಯ ಕಲ್ಪಿಸಲಾಗಿದೆ ಎಂದು ದಾವಣಗೆರೆ ಕ.ರಾ.ರ.ಸಾ. ನಿಗಮ. ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ಪ್ರಕರಣಗಳು

Published

on

ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸೋಮವಾರ 1,606 ಹೊಸ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 31 ಜನ ಸೋಂಕಿಗೆ ಬಲಿಯಾಗಿದ್ದಾರೆ.

ಈ ಪೈಕಿ ಬೆಂಗಳೂರಿನಲ್ಲಿ 467 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿಗೆ ಬಲಿಯಾಗಿದ್ದಾರೆಂದು ರಾಜ್ಯ ಆರೋಗ್ಯ ಇಲಾಖೆ ಇಂದು ಮಾಹಿತಿ ನೀಡಿದೆ. ಈವರೆಗೆ 28,36.678 ಮಂದಿ ಚೇತರಿಸಿಕೊಂಡಿದ್ದು, 23,057 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದಲ್ಲಿ 36,405 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಎಸ್​​ವೈ ರಾಜೀನಾಮೆ ಘೋಷಣೆ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಸರ್ಕಾರದ ಎರಡು ವರ್ಷಗಳ ಸಾಧನಾ ಕಾರ್ಯಕ್ರಮದ ಭಾಷಣದಲ್ಲಿ ಭಾವುಕರಾಗಿ ಸಿಎಂ ಬಿಎಸ್​​ವೈ ಕಣ್ಣೀರು ಹಾಕಿದರು.

ಸಂಘದ ಕಾರ್ಯಕರ್ತನಾಗಿ ನಂತರ ಆರೆಸ್ಸೆಸ್ ಪ್ರಚಾರಕನಾಗಿ ಬಳಿಕ ರಾಜಕೀಯ ಜೀವನ ಪ್ರವೇಶಿಸಿ ಸಂದರ್ಭದಿಂದ ಹಿಡಿದು ತಮ್ಮ ಈಗಿನ ರಾಜಕೀಯದವರೆಗೂ ತಮ್ಮ ಹೋರಾಟಗಳನ್ನ ಅವರು ಮೆಲುಕು ಹಾಕಿದರು. ಭಾಷಣದ ಮಧ್ಯೆ ಅವರು ಗದ್ಗದಿತರಾಗಿ ಕಣ್ಣೀರು ಹಾಕಿದರು. ಕೊನೆಯಲ್ಲಿ ಗದ್ಗದಿತರಾಗಿ ಊಟದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಕಣ್ಣೀರು ಹಾಕಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending