ದಿನದ ಸುದ್ದಿ
ಚನ್ನಗಿರಿ ಮನೆ ಮಗ ನಾನು, ನಿಮ್ಮ ಋಣ ತೀರಿಸುವೆ : ಬಸವರಾಜು ವಿ ಶಿವಗಾಂಗ

ಸುದ್ದಿದಿನ, ದಾವಣಗೆರೆ : ನಾನು ಕೋಗಲೂರು ಗ್ರಾಮದಲ್ಲಿ ಹುಟ್ಟಿ ಬೆಳೆದ ಈ ಚನ್ನಗಿರಿ ತಾಲೂಕಿನ ಮನೆ ಮಗ. ಕ್ಷೇತ್ರ ದ ಋಣ ತೀರಿಸುವ ಅವಕಾಶ ಸಿಕ್ಕಿದೆ ನಾನು ನಿಮ್ಮ ಸೇವೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಜಿಲ್ಲಾ ಕಿಸಾನ್ ಮೋರ್ಚಾ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ಹೇಳಿದರು.
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಿಸಾನ್ ಮೋರ್ಚಾ ದಿಂದ ಬಡವರಿಗೆ ಆಹಾರ ಧಾನ್ಯ ಕಿಟ್ ನೀಡುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ . ನಲ್ಲೂರು ನಲ್ಲಿ 2 ಸಾವಿರ ಮಂದಿ ಬಡವರು, ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ವಿತರಣೆ ಮಾಡಿದರು. ವಿಶೇಷ ಎಂದರೆ ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಿ ಯಾವುದೇ ಗೊಂದಲ ಉಂಟಾಗದಂತೆ ಎಲ್ಲರಿಗೂ ಆಹಾರ ಧಾನ್ಯ ಕಿಟ್ ನೀಡಲಾಯಿತು.
ಸರ್ಕಾರಿ ಶಾಲೆ ಹಾಗೂ ಉರ್ದು ಸರ್ಕಾರಿ ಶಾಲೆ ಆವರಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕುರ್ಚಿ ವ್ಯವಸ್ಥೆ ಕಲ್ಪಿಸಿ ಆಹಾರ ಧಾನ್ಯ ಕಿಟ್ ನೀಡಲಾಯಿತು. ಕೊರೊನಾ ಹಿನ್ನೆಲೆ ಕೆಲಸವಿಲ್ಲದೆ ದುಡಿಮೆ ಇಲ್ಲದೆ ಮನೆಯಲ್ಲೇ ಇದ್ದ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದರು ಈ ಹಿನ್ನೆಲೆ ಚನ್ನಗಿರಿ ತಾಲೂಕ್ ಲ್ಲಿ ಈಗಾಗಲೇ ಹಲವೆಡೆ ಆಹಾರ ಧಾನ್ಯ ಕಿಟ್ ನೀಡಿದ್ದು ಇಂದು ನಲ್ಲೂರು ಗ್ರಾಮದಲ್ಲಿ ಆಹಾರ ಧಾನ್ಯ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದೇವೇಳೆ ಆಶಾ ಕಾರ್ಯಕರ್ತರನ್ನ ಸನ್ಮಾನಿಸಿ ಗೌರವಿಸಲಾಯಿತು. ರೈತ ಮಗನಾಗಿ ಅವರ ಸೇವೆಯನ್ನೂ ಮಾಡುತ್ತಿರುವೆ ಕಾಂಗ್ರೆಸ್ ಕಿಸಾನ್ ಅಧ್ಯಕ್ಷನಾಗಿದ್ದು ಅಳಿವು ಸೇವೆ ಮಾಡುವೆ ಜಿಲ್ಲೆಯ ರೈತರು ಯಾವ ಸಮಸ್ಯೆ ಬಂದರು ನನ್ನ ಸಂಪರ್ಕ ಮಾಡಿ ಬಿತ್ತನೆ ಬೀಜ, ಗೊಬ್ಬರ, ಕೀಟ ನಾಶಕ ಸೂಕ್ತವಾಗಿ ರೈತರಿಗೆ ಸಿಗುವಂತ ವ್ಯವಸ್ಥೆ ಮಾಡಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.
ಇನ್ನೂ ಭದ್ರ ನೀರನ್ನ ಕಾಲುವೆಗಳಿಗೆ ಹರಿಸುವ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚೆ ಮಾಡುವೆ ರೈತರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದರು. ಇನ್ನೂ ನಾನು ರಾಜಕೀಯ ಉದ್ದೇಶದಿಂದ ಬಂದಿಲ್ಲ ನಾನು ಚುನಾವಣೆ ಗೆ ಸ್ಪರ್ಧೆ ಮಾಡುತ್ತೇನೋ ಇಲ್ಲವೋ ಗೊತ್ತಿಲ್ಲ ನಿಮ್ಮ ಸೇವೆಗೆ ನಾನು ಸದಾ ಸಿದ್ಧ ಎಂದರು. ನಾನು ಚನ್ನಗಿರಿ ಕ್ಷೇತ್ರದ ವ್ಯಕ್ತಿ ಎಂದು ಹೇಳಿಕೊಳ್ಳುಲು ಹೆಮ್ಮೆಯಾಗುತ್ತದೆ ನಾನು ಇಲ್ಲೇ ನಿಮ್ಮ ಸೇವೆ ಮಾಡುವೆ ನಿಮ್ಮ ಜೊತೆ ಯಾವಾಗಲು ಇರುವೆ ಎಂದು ಬಸವರಾಜು ವಿ ಶಿವಗಂಗಾ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮೆದಿಕೆರೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕರಾದ ವಿಜಯ ಕುಮಾರ್, ಗ್ರಾ.ಪಂ ಮಾಜಿ ಅಧ್ಯಕ್ಷರಾದ ಅಬ್ದುಲ್ ರಜಾಕ್, ತಾ.ಪಂ. ಸದಸ್ಯರಾದ
ಇಮ್ತಿಯಾಜ್ ಬೇಗ್, ನಿಸಾರ್ ಅಹ್ಮದ್, ಕಾಂಗ್ರೆಸ್ ಮುಖಂಡರಾದ ರಾಮಣ್ಣ, ಸೈಫುಲ್ಲಾ, ಪಾಲಕ್ಷ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ