ದಿನದ ಸುದ್ದಿ

ಚನ್ನಗಿರಿ | ಆರೋಪಿ ಮೃತಪಟ್ಟ ಪ್ರಕರಣ ; ಅದು ಲಾಕಪ್ ಡೆತ್ ಅಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Published

on

ಸುದ್ದಿದಿನ,ದಾವಣಗೆರೆ : ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿ ಆರೋಪಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆರೋಪಿಗೆ ಮೂರ್ಛೆ ರೋಗವಿದ್ದು ಲಾಕಪ್ ಡೆತ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಆದಿಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ದೂರಿನ ಬೆನ್ನಲ್ಲೇ ಆದಿಲ್‌ನನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.

ಕರೆತಂದ ಕೆಲವೇ ನಿಮಿಷದಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಹೇಳಿದ್ದಾರೆ.

ಆದಿಲ್ ಸಾವು ಬೆನ್ನಲ್ಲೇ ರೊಚ್ಚಿಗೆದ್ದ ಜನರು, ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ. ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚನ್ನಗಿರಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version