ದಿನದ ಸುದ್ದಿ

ಚನ್ನಗಿರಿ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ನೆರವು ಕೋರಿದ ಶಾಸಕ ಬಸವರಾಜು ವಿ ಶಿವಗಂಗಾ

Published

on

ಸುದ್ದಿದಿನ,ಬೆಂಗಳೂರು:ಉಬ್ರಾಣಿ ಹಾಗೂ ಅಮೃತಾಪುರ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಚನ್ನಗಿರಿ ಕ್ಷೇತ್ರದ ನೀರಾವರಿ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಶಾಸಕರಾದ ಬಸವರಾಜು ವಿ ಶಿವಗಂಗಾ ಒತ್ತಾಯಿಸಿದರು.

ತುಂಗಾ ಮೇಲ್ದಂಡೆ ವಲಯ ಯೋಜನೆಗಳ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿ ರೈತರ ಹಿತ ಕುರಿತು ಮಾನವರಿಕೆ ಮಾಡಿದರು.

ತುಂಗಾ ಮೇಲ್ದಂಡೆ ಯೋಜನೆ ವಲಯ ವ್ಯಾಪ್ತಿ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಜಲಸಂಪನ್ಮೂಲ ಇಲಾಖೆಯಿಂದ ಪ್ರಗತಿಯಲ್ಲಿರುವ ಕಾಮಗಾರಿಗಳು, ಕೈಗೊಳ್ಳಬೇಕಾರುವ ಯೋಜನೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಿದರು.

ಉಬ್ರಾಣಿ, ಅಮೃತಾಪುರ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಅಭಿವೃದ್ಧಿ ಕುರಿತು ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಿಗೆ ತಿಳಿಸಿದರು.

ರೈತರ ಬಗ್ಗೆ ವಿಶೇಷ ಕಾಳಜಿ ತೋರಿದ ಶಾಸಕರಾದ ಬಸವರಾಜು ವಿ. ಶಿವಗಂಗಾ ಅವರಿಗೆ ಉತ್ತಮ ಸೇವೆ ಮಾಡುತ್ತಿರುವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಚನ್ನಗಿರಿ ತಾಲ್ಲೂಕಿಗೆ ಜಲಸಂಪನ್ಮೂಲ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಜಿಲ್ಲೆಯ ಮಾನ್ಯ ಶಾಸಕರುಗಳು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version