ದಿನದ ಸುದ್ದಿ
ಜಾನುವಾರುಗಳ ಚರ್ಮಗಂಟುರೋಗ ಚಿಕಿತ್ಸೆಗೆ ಹಣ ಬಿಡುಗಡೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಸುದ್ದಿದಿನ ಡೆಸ್ಕ್ : ಜಾನುವಾರುಗಳನ್ನು ಕಾಡುತ್ತಿರುವ ಚರ್ಮಗಂಟು ರೋಗ ತಡೆಯಲು ಅಗತ್ಯವಿರುವ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿಗಾಗಿ 13 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಬೆಂಗಳೂರಿನಲ್ಲಿಂದು ಸೂಚಿಸಿದ್ದಾರೆ.
ಚರ್ಮಗಂಟು ರೋಗ ತಡೆ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ ಮೃತಪಟ್ಟ ರಾಸುಗಳ ಪರಿಹಾರಕ್ಕಾಗಿ 2ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಲಾಗುವುದು ಎಂದರು.
ಜಾನುವಾರುಗಳಿಗೆ ಚರ್ಮದ ಗಂಟುರೋಗ ಬಾಧಿಸುತ್ತಿದ್ದು ನಿಯಂತ್ರಣಕ್ಕೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡು ಲಸಿಕೆಯನ್ನು ನೀಡುವಂತೆ ಸಂಬಂಧಪಟ್ಟ ಜಿಲ್ಲಾ ಪಶುವೈದ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಸಭೆಯಲ್ಲಿ ಸಚಿವ ಪ್ರಭು ಚವ್ಹಾಣ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243