Connect with us

ಸಿನಿ ಸುದ್ದಿ

“ಚಾರ್ಲಿ” ಗೆದ್ದಳು ; ಸಂತಸ ತಂದಳು..!

Published

on

ಸುದ್ದಿದಿನ ಡೆಸ್ಕ್ : ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ “777 ಚಾರ್ಲಿ” ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. “ಚಾರ್ಲಿ” ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ ಮುನ್ನಡೆಯುತ್ತಿದೆ. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿದ್ದು ಹೀಗೆ.

ಈವರೆಗೂ ಒಟ್ಟಾರೆ 150 ಕೋಟಿ ಗ್ರಾಸ್​ ಗಳಿಕೆಯಾಗಿದೆ. ಅದರಲ್ಲಿ 90ರಿಂದ 100 ಕೋಟಿವರೆಗೂ ಲಾಭ ಬಂದಿದೆ. ಅದರಲ್ಲಿ ಶೇ. 5ರಷ್ಟು ಚಾರ್ಲಿಗೆ ಸಲ್ಲುವಂತದ್ದು. ಅವಳ ಹೆಸರಿನಲ್ಲಿ ಭಾರತದಾದ್ಯಂತ ಶ್ವಾನಗಳ ಇಂಬ್ರಿಡಿಂಗ್​ ವಿರುದ್ಧ ಹೋರಾಡುತ್ತಿರುವ ಹಾಗೂ ಅದನ್ನು ದತ್ತು ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಎನ್​ಜಿಓಗಳಿಗೆ ಸಹಾಯ ಮಾಡುವ ಕುರಿತು ಯೋಚನೆ ಮಾಡಿದ್ದೇವೆ. ಶೇ.5ರಷ್ಟು ಎಂದರೆ ಐದು ಕೋಟಿ ರೂಪಾಯಿಗಳಷ್ಟಾಗುತ್ತದೆ.

ಅದನ್ನು ನೇರವಾಗಿ ಹಂಚಿಕೆ ಮಾಡಬೇಕಾ? ಅಥವಾ ಚಾರ್ಲಿ ಹೆಸರಿನಲ್ಲಿ ಒಂದು ಅಕೌಂಟ್​ ಮಾಡಿ ದುಡ್ಡಿಟ್ಟು, ಪ್ರತಿ ತಿಂಗಳು ಸಿಗುವ ಬಡ್ಡಿಯಲ್ಲಿ ಸಹಾಯ ಮಾಡಬೇಕಾ? ಎಂಬ ವಿಷಯವಾಗಿ ಇನ್ನೂ ತೀರ್ಮಾನವಾಗಿಲ್ಲ. ಜೊತೆಗೆ ಕಲಾವಿದರು ಮತ್ತು ತಂತ್ರಜ್ಞರಿಗೆ ಶೇ. 10ರಷ್ಟು ಲಾಭದಲ್ಲಿ ಹಂಚಿಕೆ ಮಾಡಲಿದ್ದೇವೆ. ಆ ಮೊತ್ತವೇ 10 ಕೋಟಿ ರೂಪಾಯಿಗಳಷ್ಟಾಗುತ್ತದೆ. ಈ ಪಟ್ಟಿಯಲ್ಲಿ ನಾನಿಲ್ಲ. ಏಕೆಂದರೆ, ನಾನು ಒಬ್ಬ ನಟ ಮತ್ತು ನಿರ್ಮಾಪಕನಾಗಿರುವುದರಿಂದ, ನನ್ನನ್ನು ಬಿಟ್ಟು ಮಿಕ್ಕವರಿಗೆ ಹಂಚಲಿದ್ದೇವೆ ಎಂದರು ರಕ್ಷಿತ್ ಶೆಟ್ಟಿ.

25 ದಿನ ಕರ್ನಾಟಕದಲ್ಲಿ 100 ಪ್ಲಸ್​ ಸೆಂಟರ್​ಗಳಲ್ಲಿ ಚಿತ್ರ ಪ್ರದರ್ಶನವಾಗುತ್ತಿದೆ. ಬೇರೆ ದೇಶಗಳಲ್ಲಿ ಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಚಿತ್ರ ಬಿಡುಗಡೆಯಾಗಿ 15 ದಿನಗಳ ನಂತರ ಚಿತ್ರತಂಡದವರು ದುಬೈಗೆ ಹೋಗಿ ಬಂದಿದ್ದಾರೆ. ಮಾರಿಷಸ್​, ಜಪಾನ್​ ಮುಂತಾದ ಕಡೆ ಸಹ ಚಿತ್ರ ಪ್ರದರ್ಶನವಾಗುತ್ತಿದೆ. ಅಲ್ಲಿ ಪ್ರದರ್ಶನಗಳ ಪ್ರಮಾಣ ಕಡಿಮೆ ಇರಬಹುದು.

ಆದರೆ, ಕನ್ನಡಿಗರು ಎಲ್ಲೆಲ್ಲಿ ಇದ್ದಾರೋ, ಅಲ್ಲೆಲ್ಲ ಪ್ರದರ್ಶನವಾಗುತ್ತಿದೆ. ಸಾಮಾನ್ಯವಾಗಿ ಚಿತ್ರಕ್ಕೆ ಜನ ಬರುತ್ತಿಲ್ಲ ಎಂದು ಆರೋಪ ಮಾಡುತ್ತಾರೆ. ಆದರೆ, ಚಿತ್ರವನ್ನು ಚೆನ್ನಾಗಿ ಪ್ರಮೋಟ್​ ಮಾಡಿದರೆ, ಖಂಡಿತಾ ಜನ ಬರುತ್ತಾರೆ ಎಂದು “777 ಚಾರ್ಲಿ” ತೋರಿಸಿಕೊಟ್ಟಿದೆ. ಚಿತ್ರಕ್ಕೆ ಈಗಲೂ ಜನ ಬರುತ್ತಿದ್ದಾರೆ. ಭಾನುವಾರ 1 ಕೋಟಿಗೂ ಹೆಚ್ಚು ಗಳಿಕೆಯಾಗಿದೆ. ಚಿತ್ರ ಬಿಡುಗಡೆಯಾಗಿ 25 ದಿನಗಳ ನಂತರವೂ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ಮಲ್ಟಿಪ್ಲೆಕ್ಸ್​ಗಳಲ್ಲಿ ಬೇಡಿಕೆ ಇದೆ ಎಂದರು ವಿತರಕ ಕಾರ್ತಿಕ್ ಗೌಡ.

ಸಾಮಾನ್ಯವಾಗಿ ನಾಯಕಿ ಅಂದರೆ ಪ್ರೇಮಕಥೆ ಇರುತ್ತದೆ. ಇಲ್ಲಿ ಹಾಗಿಲ್ಲ. ಆದರೂ ನನ್ನ ಪಾತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಚಿತ್ರ ಈಗಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಎನ್ನುವುದೇ ಸಂತೋಷ. ಅವಕಾಶ ಕೊಟ್ಟ ಎಲ್ಲರಿಗೂ ನಾಯಕಿ ಸಂಗೀತ ಶೃಂಗೇರಿ ಧನ್ಯವಾದಗಳನ್ನು ಸಲ್ಲಿಸಿದರು.

ಸ್ನೇಹಿತರು ಮತ್ತು ಸಂಬಂಧಿಕರು ಚಿತ್ರ ನೋಡಿ ಖುಷಿಪಟ್ಟರು. ನಾವು 65 ಜನ ಒಟ್ಟಿಗೆ ಸಿನಿಪೊಲಿಸ್​ಗೆ ಹೋಗಿ ಚಿತ್ರ ನೋಡಿ ಕೇಕ್​ ಕಟ್​ ಮಾಡುವ ಮೂಲಕ ಸಂಭ್ರಮ ಆಚರಿಸಿದ್ದೇವೆ. ನಾನು ಕ್ಲಾಸ್​ಗೆ ಹೋಗುವಾಗ ಚಾರ್ಲಿ ಹುಡುಗಿ ಅಂತ ಎಲ್ಲ ಹೇಳುತ್ತಾರೆ. ಸೆಲ್ಫಿ ತೆಗೆಸಿಕೊಂಡು ಆಲ್​ ದಿ ಬೆಸ್ಟ್​ ಹೇಳುತ್ತಾರೆ ಎಂದು ಪುಟಾಣಿ ಶಾರ್ವರಿ ತಮ್ಮ ಅನುಭವ ಹಂಚಿಕೊಂಡರು.

ಸೋಲು ಹಲವು ಪಾಠ ಕಲಿಸುತ್ತದೆ. ಗೆಲುವು ಹಲವು ದಾರಿಗಳನ್ನು ತೋರಿಸುತ್ತವೆ. ಸಹಾಯಕ ನಿರ್ದೇಶಕನಾಗಿ ಮೂರು ಸಿನಿಮಾಗಳನ್ನು ಮಾಡಿದ್ದೇನೆ. ಸೋಲು, ಗೆಲುವು ಎರಡನ್ನು ನೋಡಿದ್ದೀನಿ. ಸೋಲು ನೋಡಿರುವುದರಿಂದ ಗೆಲುವಿನ ಮಹತ್ವ ಗೊತ್ತಾಯಿತು. ಈ ಜರ್ನಿಯಲ್ಲಿ ಹಲವರಿದ್ದಾರೆ. ಒಂದೇ ಮನಸ್ಥಿತಿಯವರಾದ್ದರಿಂದ ಇಂಥದ್ದೊಂದು ಪ್ರಯತ್ನ ಮಾಡುವುದಕ್ಕೆ ಸಾಧ್ಯವಾಯಿತು.

ಚಿತ್ರ 25 ದಿನ ಪೂರೈಸಿದೆ. ಮುಂದೆ ಸಹ ಇದೇ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಲಾಭ ಕೊಡುತ್ತದೆ ಎಂಬ ನಂಬಿಕೆ ಇದೆ. ಈ ಗೆಲುವಿನಿಂದ ಇನ್ನಷ್ಟು ಪ್ರಯತ್ನಗಳನ್ನು ಮಾಡುವುದಕ್ಕೆ ಸ್ಫೂರ್ತಿ ಸಿಕ್ಕಿದೆ. ಕಿರಿಕ್​ ಪಾರ್ಟಿ ಮಾಡಿದಾಗ ಹಣದ ಅಭಾವವಿತ್ತು. ಆಗ ರಕ್ಷಿತ್ ಎಲ್ಲರನ್ನೂ ಕರೆದು, ಚಿತ್ರ ಚೆನ್ನಾಗಿ ಹೋದರೆ ಇನ್ನಷ್ಟು ಕೊಡುವುದಾಗಿ ಹೇಳಿದ್ದರು. ಅದರಂತೆ ಚಿತ್ರ ಗೆದ್ದ ಮೇಲೆ ಹಲವರಿಗೆ ಅವರ ಪಾಲು ಕೊಟ್ಟರು. ಇದನ್ನು ನೋಡಿ ಕೆಲವರು ಕಣ್ಣೀರು ಹಾಕಿದ್ದು ನೆನಪಿದೆ. ಈಗಲೂ ರಕ್ಷಿತ್​ ಅದನ್ನೇ ಮುಂದುವರೆಸಿದ್ದಾರೆ ಎಂದರು ನಿರ್ದೇಶಕ ಕಿರಣ್ ರಾಜ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending