ರಾಜಕೀಯ
‘ಛತ್ರಪತಿ ಶಿವಾಜಿ ನಿಜವಾದ ಸಮಾಜವಾದಿ’ಯಾಗಿದ್ದರು : ಸಿದ್ದರಾಮಯ್ಯ

ಸುದ್ದಿದಿನ ಡೆಸ್ಕ್ : ಛತ್ರಪತಿ ಶಿವಾಜಿ ಜಾತ್ಯಾತೀತ, ಧರ್ಮಾತೀತ ನಾಯಕ. ಮೊಗಲರು ಮತ್ತು ಇಂಗ್ಲೀಷರು ಮಾತ್ರವಲ್ಲ ಹಿಂದೂ ಅರಸರು ಕೂಡಾ ಅವನ ವೈರಿಗಳಾಗಿದ್ದರು. ಆ ಕಾಲದ ಯುದ್ಧ ಧರ್ಮಗಳ ನಡುವೆ ನಡೆಯುತ್ತಿರಲಿಲ್ಲ. ಇದನ್ನು ಅರ್ಥಮಾಡಿಕೊಳ್ಳದೆ ಶಿವಾಜಿಯನ್ನು ಹಿಂದೂ ಧರ್ಮದ ರಕ್ಷಕನಂತೆ ಬಿಂಬಿಸುವುದು ಸರಿಯಲ್ಲ ಎಂದು ಭಾನುವಾರ ನಡೆದ ಬೆಳಗಾವಿ ಜಿಲ್ಲೆ ಯಮಕನಮರಡಿ ವಿಧಾನಸಭೆ ಕ್ಷೇತ್ರದ ಕಡೋಲಿ ಗ್ರಾಮದಲ್ಲಿ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ನಂತರ ಮಾತನಾಡಿದ ಅವರು, ಶೂದ್ರಾದಿ ಶೂದ್ರ ಸಮುದಾಯದಲ್ಲಿ ಹುಟ್ಟಿ, ಬುಡಕಟ್ಟು ಜನರನ್ನು, ಹಿಂದುಳಿದ ವರ್ಗದವರು ಮತ್ತು ಮುಸ್ಲಿಮರನ್ನು ಕೂಡಾ ಒಗ್ಗೂಡಿಸಿ ಸೈನ್ಯ ಕಟ್ಟಿ, ಮೊಗಲ ಸಾಮ್ರಾಟ ಔರಂಗಜೇಬನ ವಿರುದ್ಧ ಮಾತ್ರವಲ್ಲ ಹಿಂದೂ ಪಾಳೆಗಾರರ ವಿರುದ್ಧವೂ ಯುದ್ಧವನ್ನು ಮಾಡಿದವರು ಶಿವಾಜಿ ಎಂದರು.
ಶಿವಾಜಿ ನಿಜವಾದ ಸಮಾಜವಾದಿಯಾಗಿದ್ದರು. ಭೂಮಾಲೀಕ ಪದ್ಧತಿಯನ್ನು ರದ್ದುಗೊಳಿಸಿ ರೈತರು ನೇರವಾಗಿ ಸರಕಾರಕ್ಕೆ ಕಂದಾಯವನ್ನು ಕೊಡುವ ಪದ್ಧತಿಯನ್ನು ಹುಟ್ಟುಹಾಕಿದ್ದರು. ಭೂಮಾಲೀಕರ ಶೋಷಣೆಯನ್ನು ತಡೆಗಟ್ಟಲು ಅಧಿಕಾರಿಗಳನ್ನು ನೇಮಿಸಿ, ಅನಾವೃಷ್ಟಿ ಮತ್ತು ಅತಿವೃಷ್ಟಿಯಿಂದ ಬೆಳೆ ನಾಶವಾದರೆ ಪರಿಹಾರ ಧನ, ಆಹಾರ ಧಾನ್ಯ ಕೊಡುವ ವ್ಯವಸ್ಥೆ ಮಾಡಿದ್ದರು ಎಂದು ಹೇಳಿದರು.
ಸಂಘ ಪರಿವಾರದ 'ಕ್ಲರ್ಕ್' ಆಗಿರುವ #PMNarendraModi ಅವರು ತಮ್ಮ ಅನುಭವದ ಮಾತಿನಲ್ಲಿಯೇ #HDKumaraswamy ಅವರನ್ನು ಟೀಕಿಸಿದ್ದಾರೆ.
ಹುಟ್ಟುಗುಣ ಸುಟ್ಟರೂ….
— Siddaramaiah (@siddaramaiah) January 12, 2019
ಹುಟ್ಟುತ್ತಾ ಪ್ರತಿ ಮಗುವು ವಿಶ್ವ ಮಾನವ, ಬೆಳೆಯುತ್ತಾ ಅದನ್ನು ನಾವು ಅಲ್ಪಮಾನವನಾಗಿ ಮಾಡುತ್ತೇವೆ ಎಂದು ಕುವೆಂಪು ಹೇಳಿದ್ದರು. ನಮ್ಮ ಮಕ್ಕಳು ಜಾತಿವಾದಿಯಾಗಿ, ಧರ್ಮಾಂಧನಾಗಿ ಬೆಳೆಯದಂತೆ ನಿಜವಾದ ಧರ್ಮದ ಅರಿವು ಅವರಲ್ಲಿ ಮೂಡಿಸುವುದು ಹಿರಿಯರ ಜವಾಬ್ದಾರಿಯಾಗಿದೆ ಎಂದು ಎಚ್ಚರಿಕೆ ನೀಡಿದರು.
ಸಂವಿಧಾನದ ಮುಂದೆ ಎಲ್ಲ ಜಾತಿ, ಧರ್ಮಗಳು ಸಮಾನ. ರಾಜಕೀಯ ಸ್ವಾರ್ಥಕ್ಕಾಗಿ ಪಕ್ಷಗಳು ಯಾವುದೋ ಒಂದು ಧರ್ಮದ ಪರವಾಗಿ ನಿಲ್ಲುವುದು ತಪ್ಪು.ಬಸವಣ್ಣನವರು ಹೇಳಿದ್ದ ದಯೆಯಿಂದ ಕೂಡಿರುವ ಧರ್ಮ ನಮ್ಮದಾಗಬೇಕು. ಆಗ ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.
ಶಿವಾಜಿ ನಿಜವಾದ ಸಮಾಜವಾದಿಯಾಗಿದ್ದರು. ಭೂಮಾಲಕ ಪದ್ಧತಿಯನ್ನು ರದ್ದುಗೊಳಿಸಿ ರೈತರು ನೇರವಾಗಿ ಸರಕಾರಕ್ಕೆ ಕಂದಾಯವನ್ನು ಕೊಡುವ ಪದ್ಧತಿಯನ್ನು ಹುಟ್ಟುಹಾಕಿದ್ದರು. ಭೂಮಾಲೀಕರ ಶೋಷಣೆಯನ್ನು ತಡೆಗಟ್ಟಲು ಅಧಿಕಾರಿಗಳನ್ನು ನೇಮಿಸಿ, ಅನಾವೃಷ್ಟಿ ಮತ್ತು ಅತಿವೃಷ್ಟಿಯಿಂದ ಬೆಳೆ ನಾಶವಾದರೆ ಪರಿಹಾರ ಧನ, ಆಹಾರ ಧಾನ್ಯ ಕೊಡುವ ವ್ಯವಸ್ಥೆ ಮಾಡಿದ್ದರು. pic.twitter.com/9pl7renQh1
— Siddaramaiah (@siddaramaiah) January 12, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.
ಬರಗಾಲ ಘೋಷಿತ ಪ್ರದೇಶಗಳಿಗೆ ಪರಿಹಾರ ಒದಗಿಸಲು ಇರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದ್ದು, ಬರಗಾಲ ಘೋಷಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಡಿಯುವ ನೀರು, ಬಿತ್ತನೆಗೆ ನೆರವು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತದೆ. ಆದರೆ ಕೇಂದ್ರ ಸರ್ಕಾರದಿಂದ ಸಕಾಲದಲ್ಲಿ ನೆರವು ಬರಬೇಕಿದೆ ಎಂದು ಹೇಳಿದರು. ವಿದ್ಯಾವಿಕಾಸ ಯೋಜನೆಯಡಿ ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿದ್ದು, ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಕೈಮಗ್ಗ ಸಂಸ್ಥೆಯಿಂದ ಮಕ್ಕಳಿಗೆ ನೀಡಲಾಗಿದ್ದ ಸಮವಸ್ತ್ರ ಕಳಪೆಯಾಗಿರುವ ಬಗ್ಗೆ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಳಪೆ ಬಟ್ಟೆ ನೀಡಿರುವುದಕ್ಕೆ ಪಾವತಿಯೂ ಆಗಿರುವುದರಿಂದ, ಸಂಬಂಧಪಟ್ಟವರನ್ನು ಇದಕ್ಕೆ ಜವಾಬ್ದಾರರನ್ನಾಗಿಸಬೇಕೆಂದು ತೀರ್ಮಾನಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಬಂಧಪಟ್ಟವರಿಂದ ಪಾವತಿಸಲಾಗದ ಮೊತ್ತವನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ 34 ಸಾವಿರ ಕೋಟಿ ರೂಪಾಯಿ ಮೀಸಲು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಸುದ್ದಿದಿನ, ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ವಿಶೇಷ ಘಟಕ ಯೋಜನೆಯಡಿ ಒಟ್ಟು 34ಸಾವಿರ ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಪರಿಶಿಷ್ಟ ಜಾತಿಗೆ 24 ಸಾವಿರ ಕೋಟಿ ರೂಪಾಯಿ, ಪಂಗಡಕ್ಕೆ 8ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. 40 ಇಲಾಖೆಗಳಿಗೆ ಮೀಸಲಿಡಲಾಗಿದೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.
ವಿಶೇಷ ಘಟಕ ಯೋಜನೆಯ ಹಣವನ್ನು ಇತರೆ ಯಾವುದೇ ವಿಭಾಗಕ್ಕೂ ಬಳಕೆ ಮಾಡುವುದಿಲ್ಲ. ಪರಿಶಿಷ್ಟ ಸಮುದಾಯಗಳ ಕಲ್ಯಾಣಕ್ಕಾಗಿ ಆಯವ್ಯಯದಲ್ಲಿ ಮೀಸಲಿಟ್ಟಿರುವ ಹಣವನ್ನು ವಿನಿಯೋಗಿಸಲಾಗುವುದು ಎಂದು ಡಾ.ಮಹದೇವಪ್ಪ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಗಸ್ಟ್ ತಿಂಗಳಲ್ಲಿ ಸಂಗ್ರಹವಾದ ಜಿಎಸ್‌ಟಿ ಮೊತ್ತ ಎಷ್ಟು ಗೊತ್ತಾ?!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಒಟ್ಟು 1 ಲಕ್ಷ 59 ಸಾವಿರದ 69 ಕೋಟಿ ರೂಪಾಯಿ ಜಿಎಸ್‌ಟಿ ಆದಾಯ ಸಂಗ್ರಹವಾಗಿದೆ.
35 ಸಾವಿರದ 794ಕೋಟಿ ರೂಪಾಯಿ ಕೇಂದ್ರೀಯ ಜಿಎಸ್‌ಟಿ, 83ಸಾವಿರದ 251 ಕೋಟಿ ರೂಪಾಯಿ ಸಮಗ್ರ ಸರಕು ಮತ್ತು ಸೇವಾ ತೆರಿಗೆ ಇದು ಒಳಗೊಂಡಿದೆ. 37 ಸಾವಿರದ 581 ಕೋಟಿ ರೂಪಾಯಿಗಳನ್ನು ಕೇಂದ್ರ ಸರಕು ಮತ್ತು ಸೇವಾ ತೆರಿಗೆಗೆ ಹಾಗೂ 31 ಸಾವಿರದ 408ಕೋಟಿ ರೂಪಾಯಿಗಳನ್ನು ಸಮಗ್ರ ಸರಕು ಮತ್ತು ಸೇವಾ ತೆರಿಗೆ ಯಿಂದ ರಾಜ್ಯ ಸರಕು ಮತ್ತು ಸೇವಾ ತೆರಿಗೆಗೆ ಸರ್ಕಾರ ಇತ್ಯರ್ಥ ಪಡಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ