Connect with us

ದಿನದ ಸುದ್ದಿ

ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು

Published

on

ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಮುಖ್ಯಾಂಶಗಳು:

1. ಪೊಲೀಸ್ ಇಲಾಖೆಯಲ್ಲಿ ಹಲವು ಸುಧಾರಣೆಗಳು, ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು.

2. ಮುಂದಿನ ದಿನಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ:

3. ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್ ಗಳ ತಪಾಸಣೆ ನಡೆಸಬೇಕು.

4. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು. ಆಗ ಹತೋಟಿಯಲ್ಲಿರುತ್ತದೆ.

5. ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚಿಸಿದರು.

6. ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

7. ಕಾನೂನು, ಸುವ್ಯವಸ್ಥೆ ಕಾಪಾಸುವುದು ಸರ್ಕಾರದ ಪ್ರಥಮ ಆದ್ಯತೆ.

8. ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು.

9. ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.

10. ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು.

11. ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು.

12. ಪೊಲೀಸ್ ವ್ಯವಸ್ಥೆ ಜನಸ್ನೇಹಿ ಯಾಗಬೇಕು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending