ದಿನದ ಸುದ್ದಿ
ದಾವೋಸ್‌ನ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪ್ರಮುಖ ಉದ್ಯಮಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ
ಸುದ್ದಿದಿನ ಡೆಸ್ಕ್ : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಅರ್ಸೆಲರ್ ಮಿತ್ತಲ್ ಕಂಪೆನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಲಕ್ಷ್ಮಿ ಎನ್. ಮಿತ್ತಲ್ ಅವರೊಂದಿಗೆ ಮಾತುಕತೆ ನಡೆಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ದಾವೋಸ್ ದಸ್ಸಾಲ್ಸ್ ಸಿಸ್ಟಮ್ಸ್ ಹಾಗೂ ನೆಸ್ಟ್ಲೇ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳ ಕುರಿತು ಚರ್ಚಿಸಿದರು.
ರಾಜ್ಯದಲ್ಲಿ ವಿದ್ಯುತ್ ವಾಹನಗಳು ಮತ್ತು ಕೇಂದ್ರ ಉತ್ಪಾದನಾ ತಾಂತ್ರಿಕ ಸಂಸ್ಥೆಯ ಸಹಯೋಗದಲ್ಲಿ ಆಧುನಿಕ ಉತ್ಪಾದನೆ ಕ್ಷೇತ್ರ, ವಿದ್ಯಾರ್ಥಿಗಳಿಗೆ ಮುಂದಿನ ೪ನೇ ತಲೆಮಾರಿನ ಕೈಗಾರಿಕೆ, ಡಿಜಿಟಲ್ ತಂತ್ರಜ್ಞಾನದ ಬಗ್ಗೆ ತರಬೇತಿ, ರಾಜ್ಯದ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ದಸ್ಸಾಲ್ಸ್ ಸಿಸ್ಟಮ್ಸ್ ಸಂಸ್ಥೆ ಉತ್ಸುಕತೆ ತೋರಿದೆ.
ನಂಜನಗೂಡಿನಲ್ಲಿ ನೆಸ್ಟ್ಲೆ ಇನ್ಸೆಂಟ್ ಕಾಫಿ ಕಾರ್ಖಾನೆಯ ನವೀಕರಣ ಹಾಗೂ ವಿಸ್ತರಣಾ ಕಾರ್ಯಕ್ಕೆ ನೆಸ್ಟ್ಲೆ ಸಂಸ್ಥೆ ಮುಂದಾಗಿದೆ. ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಈಶ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಕರ್ನಾಟಕ ಪೆವಿಲಿಯನ್ ಗೆ ಭೇಟಿ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು.
CM @BSBommai Inaugurated the Karnataka Pavilion at the World Economic Forum, Davos. Karnataka is home to a strong ecosystem for various sectors and the participation will aid showcasing the state's key strengths.#WEF2022 #WorldEconomicForum #KarnatakaAtDavos #BuildForTheWorld pic.twitter.com/HBRSvFc4vo
— CM of Karnataka (@CMofKarnataka) May 23, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243