ದಿನದ ಸುದ್ದಿ
ಚಿಗಟೇರಿ ಜಿಲ್ಲಾ ಆಸ್ಪತ್ರೆ ಇನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆ
ಸುದ್ದಿದಿನ, ದಾವಣಗೆರೆ : ಕೋವಿಡ್ ಪ್ರಕರಣಗಳು ಹೆಚ್ಚು ಹೆಚ್ಚು ವರದಿಯಾಗುತ್ತಿದ್ದು, ವಿವಿಧ ತಾಲ್ಲೂಕುಗಳಿಂದಲೂ ಕೋವಿಡ್ ಸೋಂಕಿತರು ಚಿಕಿತ್ಸೆಗಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಬರುತ್ತಿದ್ದಾರೆ. ಸೋಂಕಿತರಿಗೆ ಬೆಡ್ ಹಾಗೂ ಚಿಕಿತ್ಸೆಗೆ ಇನ್ನಷ್ಟು ಅನುಕೂಲ ಮಾಡಿಕೊಡಬೇಕಿದೆ. ಅಲ್ಲದೆ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಕೋವಿಡ್ ಚಿಕಿತ್ಸೆಗೆ ಸಂಪೂರ್ಣ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ | ದಾವಣಗೆರೆ | ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಕಿಟ್
ಈ ನಿಟ್ಟಿನಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಸಚಿವರು, ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಇದು ಅಗತ್ಯವಾಗಿದ್ದು, ಕೂಡಲೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿಸಿ, ನಾನ್‍ಕೋವಿಡ್ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಯಲ್ಲಿ ವ್ಯವಸ್ಥೆಗೊಳಿಸುವಂತೆ ಸೂಚನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243