ದಿನದ ಸುದ್ದಿ

ಚಿಕ್ಕಬಳ್ಳಾಪುರ | ಪ್ರಾಯೋಗಿಕವಾಗಿ ಆಯೋಜಿಸಿರುವ 2 ದಿನಗಳ ಬೃಹತ್ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿ : ಡಾ.ಕೆ.ಸುಧಾಕರ್

Published

on

ಸುದ್ದಿದಿನ, ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ಆಯೋಜಿಸಿರುವ 2 ದಿನಗಳ ಬೃಹತ್ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಆಯೋಜಿಸಲಾಗಿರುವ ಬೃಹತ್ ಆರೋಗ್ಯ ಮೇಳದಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು ಬೃಹತ್ ಆರೋಗ್ಯ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರಿದ್ದು, ಈ ಮೇಳದಲ್ಲಿ ಲಕ್ಷಾಂತರ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು, ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ ಎಂದರು. ಶನಿವಾರ ಹಾಗೂ ಭಾನುವಾರದ ರಜಾ ದಿನಗಳನ್ನು ಆರಿಸಿಕೊಂಡು ಆರೋಗ್ಯ ಮೇಳ ಮಾಡಲಾಗಿದೆ.

ಡಾ.ಸುಜಾತ ರಾಥೋಡ್ ; ಮಿಂಟೋ ಕಣ್ಣಿನ ಆಸ್ಪತ್ರೆ ನಿರ್ದೇಶಕರು

ಜನರು ಹೆಚ್ಚು ವಿಶ್ವಾಸದಿಂದ, ಉತ್ಸಾಹದಿಂದ ಮೇಳಕ್ಕೆ ಬಂದು ವೈದ್ಯಕೀಯ ಸೇವೆ ಪಡೆದಿದ್ದಾರೆ. ರಾಜ್ಯ ಸರ್ಕಾರದಿಂದಲೇ ಈ ರೀತಿಯ ಆರೋಗ್ಯ ಮೇಳವನ್ನು ಪ್ರತಿ ಜಿಲ್ಲೆಯಲ್ಲಿ ನಡೆಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಇದನ್ನು ಜನಾಂದೋಲನದಂತೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯ ನಿರ್ದೇಶಕರು ಡಾ.ಸುಜಾತಾ ರಾಥೋಡ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಆರೋಗ್ಯ ಮೇಳದಲ್ಲಿ‌ ಮಿಂಟೋ ಕಣ್ಣಿನ ಆಸ್ಪತ್ರೆ ಸಿಬ್ಬಂದಿಗಳು

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version