ದಿನದ ಸುದ್ದಿ
ಬಾಲ್ಯ ವಿವಾಹ ತಡೆಗೆ ನೂತನ ಕಾಯ್ದೆ ಜಾರಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್

ಸುದ್ದಿದಿನಡೆಸ್ಕ್:ಬಾಲ್ಯ ವಿವಾಹ ತಡೆಯಲು ನೂತನ ಕಾಯ್ದೆ ಜಾರಿಗೆ ತರಲಾಗುವುದು ಎಂದು ಚಿತ್ರದುರ್ಗದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಕರ್ ತಿಳಿಸಿದ್ದಾರೆ.
ಗೃಹ, ಡಿಪಿಆರ್, ನ್ಯಾಯಾಂಗ, ಮಹಿಳಾ ಮಕ್ಕಳ ಕಲ್ಯಾಣ, ಆರೋಗ್ಯ, ಶಿಕ್ಷಣ ಸೇರಿದಂತೆ ಒಂಬತ್ತು ಇಲಾಖೆಗಳಿಗೆ ಸಂಬಂಧಸಿದ ಒಳಗೊಂಡ ನೂತನ ಕಾಯ್ದೆಗೆ ತಿದ್ದುಪಡಿ ಮಾಡಲು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ಬಾಲ್ಯ ವಿವಾಹ ಪಿಡುಗು ಬಹಳ ಗಂಭೀರವಾದ ವಿಷಯವಾಗಿದ್ದು, ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿಯೇ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿದ್ದು, ನಂ.1 ಸ್ಥಾನ ಪಡೆದಿದೆ. ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಜಾಗೃತಿ ಶಿಬಿರಗಳನ್ನು ಹೆಚ್ಚಾಗಿ ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾದ ಹಿನ್ನಲೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಜಿಲ್ಲೆಗೆ ಆಗಮಿಸಿದ್ದೇನೆ. ಜಿಲ್ಲೆಯಲ್ಲಿ ಹೆಚ್ಚಿದ ಬಾಲ್ಯ ವಿವಾಹ ತಡೆಗೆ ಕೈಗೊಂಡ ಕ್ರಮಗಳೇನು? ಯಾವ ಕ್ರಮಗಳು ಕೈಗೊಂಡರೆ ಬಾಲ್ಯವಿವಾಹ ತಡೆಯಲು ಸಾಧ್ಯವಿದೆ? ಅಧಿಕಾರಿಗಳ ಕಾರ್ಯವೈಖರಿ ಏನು? ತಪ್ಪಿತಸ್ಥ ಎಷ್ಟು ಜನರಿಗೆ ಶಿಕ್ಷೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅಧಿಕಾರಿಗಳನ್ನು ಪ್ರಶ್ನಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಈಗಾಗಲೇ ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಶಿಬಿರ ನಡೆಸಿ ಅರಿವು ಮೂಡಿಸಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಅಧಿಕಾರಿಗಳಿಗೂ ಈ ಕುರಿತು ತರಬೇತಿ ನೀಡಲಾಗಿದೆ ಎಂದು ಹೇಳಿದರು.
ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 87 ದೂರುಗಳು ಬಂದಿದ್ದು, 42 ಪ್ರಕರಣಗಳನ್ನು ತಡೆಯಲಾಗಿದ್ದು, 41 ಬಾಲ್ಯ ವಿವಾಹ ಪ್ರಕರಣಗಳು ನಡೆದಿವೆ, ಈ ಪ್ರಕರಣಗಳಿಗೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ತಾಯಂದಿರ ಮರಣ ಪ್ರಮಾಣ ಒಂದು ಲಕ್ಷ ಜೀವಂತ ಜನನಕ್ಕೆ 83.29 ಇರುವುದು ಕಳವಳಕಾರಿಯಾಗಿದೆ. ತಾಯಂದಿರ ಮರಣ ರಾಜ್ಯ ಪ್ರಮಾಣ ಸರಾಸರಿ 69 ರಷ್ಟಿದೆ. ಸಾಂಸ್ಥಿಕ ಹೆರಿಗೆಯ ನಂತರೂ ಬಾಣಂತಿಯರು ಸಾವನ್ನಪ್ಪುತ್ತಿರುವುದು ಏಕೆ? ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಹೆರಿಗೆ ನಂತರ ಬಾಣಂತಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲವೇ? ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಅವರನ್ನು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಜುಲೈವರೆಗೆ 5 ಬಾಣಂತಿಯರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ 21 ರಿಂದ 24 ವಯೋಮಾನದವರಾಗಿದ್ದು, ಆಸ್ಪತ್ರೆಯಲ್ಲಿ ಹೆರಿಗೆ ಆದ ಮೇಲೆ ಮನೆಗೆ ತೆರಳಿದ ನಂತರ ಸಾವನ್ನಪ್ಪಿದ್ದಾರೆ ಎಂದು ಡಾ.ಅಭಿನವ್ ತಿಳಿಸಿದರು.
ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಒಂದು ಸಾವಿರ ಜೀವಂತ ಜನನಕ್ಕೆ 13 ಇದೆ. ರಾಜ್ಯದ ಶಿಶು ಪ್ರಮಾಣ ಸರಾಸರಿ 19 ರಷ್ಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯ ಶಿಶು ಪ್ರಮಾಣ ಕಡಿಮೆಯಾಗಿದೆ ಎಂದು ಜಿಲ್ಲಾಧಿಕಾರಿ.ಟಿ.ವೆಂಕಟೇಶ್ ಸಚಿವರ ಗಮನಕ್ಕೆ ತಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ