ದಿನದ ಸುದ್ದಿ

ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

Published

on

ಸುದ್ದಿದಿನ,ರಾಯಚೂರು: ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು, ಆದರೆ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದು, ಸೋಮವಾರ 9 ವರ್ಷದ ವರುಣ್, 5 ವರ್ಷದ ಸಣ್ಣಯ್ಯ ಇವರು ಶವವಾಗಿ ಪತ್ತೆಯಾಗಿದ್ದಾರೆ.

ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದಿಂದ ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ಬಾಲಕರು ಮನೆಯ ಹೊರಗಡೆ ಆಟವಾಡುತ್ತಿದ್ದವರು ಏಕಾಏಕಿ ನಾಪತ್ತೆಯಾಗಿದ್ದರು. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದರು. ಆದರೆ ಮಕ್ಕಳು ಹಳ್ಳದಲ್ಲಿ ಸ್ನಾನ ಮಾಡಲು ಹೋಗಿ ಪ್ರಾಣಕಳೆದುಕೊಂಡಿದ್ದು ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆಯು ನಡೆದಿದೆ.

ನಾಪತ್ತೆಯಾದ ಬಾಲಕರಿಗಾಗಿ ಭಾನುವಾರ ಪೊಲೀಸರು ಹುಡುಕಾಟ ನಡೆಸಿದ್ದರು. ಸಿರವಾರ ಹಾಗೂ ಕವಿತಾಳ ಠಾಣೆ ಪೊಲೀಸರಿಂದ ಬಾಲಕರಿಗಾಗಿ ಹುಡುಕಾಟ ನಡೆದಿತ್ತು, ಗ್ರಾಮದ ಹಳ್ಳದಲ್ಲೇ ಇಂದು ಬೆಳಗ್ಗೆ ಶವಗಳು ಪತ್ತೆಯಾಗಿವೆ.

ಹಂಪಯ್ಯ ನಾಯಕ್ ಕೊನೆಯ ಪುತ್ರ ಶಿವಾನಂದ ಮಕ್ಕಳಾದ ವರುಣ್ ಹಾಗೂ ಸಣ್ಣಯ್ಯ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version