ದಿನದ ಸುದ್ದಿ
ಚಿತ್ರದುರ್ಗ | 21 ಕೊರೋನಾ ಪಾಸಿಟಿವ್
ಸುದ್ದಿದಿನ, ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನಲ್ಲಿ 08, ಚಳ್ಳಕೆರೆ 04, ಹಿರಿಯೂರು 05, ಹೊಸದುರ್ಗ ತಾಲ್ಲೂಕಿನಲ್ಲಿ 01 ಹಾಗೂ ಹೊರ ಜಿಲ್ಲೆಯ 03 ಪ್ರಕರಣಗಳು ಸೇರಿದಂತೆ ಒಟ್ಟು 21 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 21 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 1749 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 21 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 15,336ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 69 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ.
ಸೋಂಕಿತರ ಪೈಕಿ ಈಗಾಗಲೆ 15,153 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 114 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,25,715 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 3,70,302 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,53,683 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 588 ಜನರ ವರದಿ ಬರುವುದು ಬಾಕಿ ಇದೆ. 695 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243