ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ 640 ಜನರಿಗೆ ಕೊರೋನಾ ಪಾಸಿಟಿವ್ : 141 ಮಂದಿ ಬಿಡುಗಡೆ

Published

on

ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 640 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,730 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 263, ಚಳ್ಳಕೆರೆ 35, ಹಿರಿಯೂರು 85, ಹೊಳಲ್ಕೆರೆ 55, ಹೊಸದುರ್ಗ 96, ಮೊಳಕಾಲ್ಮುರು ತಾಲ್ಲೂಕಿನಲ್ಲಿ 79 ಪ್ರಕರಣ ಸೇರಿದಂತೆ ಒಟ್ಟು 640 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 141 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 2410 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 640 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 20,730ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು 4 ಮಂದಿ ಮೃತರಾಗಿದ್ದು ಇದುವರೆಗೆ ಒಟ್ಟು 112 ಜನ ಮೃತಪಟ್ಟಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ : ಮೈಸೂರು ಕಾಗದ ಕಾರ್ಖಾನೆ ನಿಯಮಿತ (ಎಂ.ಪಿ.ಎಂ)

ಸೋಂಕಿತರ ಪೈಕಿ ಈಗಾಗಲೆ 17,704 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2,914 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,67,835 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 4,50,077 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,27,384 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1210 ಜನರ ವರದಿ ಬರುವುದು ಬಾಕಿ ಇದೆ. 753 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version