ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ 140 ಜನರಿಗೆ ಕೋವಿಡ್ ಸೋಂಕು ದೃಢ : 66 ಮಂದಿ ಬಿಡುಗಡೆ

Published

on

ಸುದ್ದಿದಿನ,ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 140 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16,444ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 45, ಚಳ್ಳಕೆರೆ 8, ಹಿರಿಯೂರು 16, ಹೊಳಲ್ಕೆರೆ 19, ಹೊಸದುರ್ಗ 32, ಮೊಳಕಾಲ್ಮುರು ತಾಲ್ಲೂಕಿನಲ್ಲಿ 15 ಹಾಗೂ ಹೊರ ಜಿಲ್ಲೆಯ 05 ಪ್ರಕರಣಗಳು ಸೇರಿದಂತೆ ಒಟ್ಟು 140 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ  66 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಒಟ್ಟು 2299 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 140 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 16,444 ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 70 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ | ದಾವಣಗೆರೆ | ಮಳೆ ವಿವರ 

ಸೋಂಕಿತರ ಪೈಕಿ ಈಗಾಗಲೆ 15,593 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 781 ಸಕ್ರಿಯ ಪ್ರಕರಣಗಳು ಇವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,32,206 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 4,00,608 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,82,450 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 1007 ಜನರ ವರದಿ ಬರುವುದು ಬಾಕಿ ಇದೆ. 707 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version