ದಿನದ ಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ ಮತಗಟ್ಟೆಗಳ ಹೆಸರು ಪರಿಷ್ಕರಣೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ 34ಮತಗಟ್ಟೆಗಳ ಹೆಸರು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗ ಅನುಮೋದನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅವರು ಇಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲಾ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025ರ ಸಂಬಂಧ ಮತಗಟ್ಟೆಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಏಜೆಂಟರುಗಳಿಗೆ ಪಟ್ಟಿಯನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ಒಂದು ಸಾವಿರದ 661 ಮತಗಟ್ಟೆಗಳಿದ್ದು, ಮೊಳಕಾಲ್ಮೂರು ಕ್ಷೇತ್ರದಲ್ಲಿ 285, ಚಳ್ಳಕೆರೆ 260, ಚಿತ್ರದುರ್ಗ 288, ಹಿರಿಯೂರು 287, ಹೊಸದುರ್ಗ 242 ಹಾಗೂ ಹೊಳಲ್ಕೆರೆ ಕ್ಷೇತ್ರದಲ್ಲಿ 299 ಮತಗಟ್ಟೆಗಳು ಇವೆ. ಈ ಪೈಕಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಆರು ಮತಗಟ್ಟೆಗಳ ಸ್ಥಳ ಬದಲಾವಣೆ ಹಾಗೂ 34 ಮತಗಟ್ಟೆಗಳ ಹೆಸರುಗಳನ್ನು ಸರಿಪಡಿಸಿ, ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸಭೆಯಲ್ಲಿ ಮಾಹಿತಿ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version