ದಿನದ ಸುದ್ದಿ
ಚಿತ್ರದುರ್ಗ ಫೋರ್ಟ್ ಬೆಳ್ಳಿ ಮಹೋತ್ಸವ
ವೈ.ಆರ್.ಆದಿಶೇಷ ರೋಟರಿ ಭವನ ಉದ್ಘಾಟಿಸಿದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
ಚಿತ್ರದುರ್ಗ: ಸಾರ್ವಜನಿಕ ಸಮಸ್ಯೆಗಳನ್ನು ಸರ್ಕಾರ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರುವ ಕೆಲಸವನ್ನು ರೋಟರಿ ಸಂಸ್ಥೆ ಮಾಡಿಕೊಂಡು ಬರುತ್ತಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಬೆಳ್ಳಿ ಮಹೋತ್ಸವದ ಅಂಗವಾಗಿ ಮೆದೆಹಳ್ಳಿ ರಸ್ತೆಯಲ್ಲಿರುವ ಮರುಳಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ವೈ.ಆರ್.ಆದಿಶೇಷ ರೋಟರಿ ಭವನ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕ ಸೇವೆಯ ಜೊತೆಗೆ ಬಡ ಮಕ್ಕಳ ಮತ್ತು ಅನಾಥ ಮಕ್ಕಳಿಗೆ ಸಹಾಯ ಮಾಡಿಕೊಂಡು ಬರುತ್ತಿರುವ ರೋಟರಿ ಸಂಸ್ಥೆ ಇನ್ನು ಹೆಚ್ಚು ಹೆಚ್ಚು ಸಾರ್ವಜನಿಕ ಸೇವೆ ಮಾಡಲಿ. ಆದಿಶೇಷರ ಹೆಸರಿನ ಮೇಲೆ ಭವನ ಕಟ್ಟಿರುವುದು ಅತ್ಯಂತ ಸಂತೋಷದ ಸಂಗತಿ. ಇತ್ತೀಚಿನ ದಿನಗಳಲ್ಲಿ ಸಂಘ ಸಂಸ್ಥೆಗಳು ಕಟ್ಟುವ ಕಟ್ಟಡಗಳು ಕಳಪೆಯಾಗಿರುತ್ತವೆ. ಅದರೆ ರೋಟಿರಿ ಸಂಸ್ಥೆ ಕಟ್ಟಿರುವ ಈ ಭವನ ಉತ್ತಮ ಗುಣಮಟ್ಟದಿಂದ ಕೂಡಿದೆ. ಪ್ರಕೃತಿ ವಿಕೋಪ, ಭೂಕಂಪ, ಅಪಘಾತವಾದಾಗ ಸರ್ಕಾರ ಎಷ್ಟೆ ಸಹಾಯ ಮಾಡಿದರೂ ರೋಟರಿಯಂತ ಸಂಸ್ಥೆ ಸ್ವಯಂ ಆಗಿ ನೆರವಿಗೆ ಮುಂದೆ ಬರುತ್ತದೆ. ಸುತ್ತಮುತ್ತಲಿನ ಸಮಸ್ಯೆಗಳಿಗೆ ಇನ್ನು ಹೆಚ್ಚಿನ ರೀತಿಯಲ್ಲಿ ಸ್ಪಂದಿಸಲಿ ಎಂದು ಹಾರೈಸಿದರು.
ರೊಟೇರಿಯನ್ ಪಿ.ಹೆಚ್.ಎಫ್. ಎಂ.ಕೆ.ರವೀಂದ್ರ ಮಾತನಾಡಿ, ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್ ಇಪ್ಪತ್ತೈದು ವರ್ಷಗಳನ್ನು ಪೂರೈಸಿರುವುದು ಸುಲಭದ ಮಾತಲ್ಲ. ಮೂರು ಓವರ್‍ಹೆಡ್ ಟ್ಯಾಂಕ್, ಆರು ಬೋರ್‍ವೆಲ್‍ಗಳನ್ನು ನಿರ್ಮಿಸಿ ಅಲ್ಲಲ್ಲಿ ಕುಡಿಯುವ ನೀರಿಸ ಸೌಲಭ್ಯಗಳನ್ನು ಒದಗಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಪ್ರತಿಭಾ ಪುರಸ್ಕಾರ, ಪೋಲಿಯೋ ನಿರ್ಮೂಲನೆ ಮಾಡುವಲ್ಲಿ ರೋಟರಿ ಸಂಸ್ಥೆ ಹಿಂದಿನಿಂದಲೂ ಶ್ರಮಿಸುತ್ತಿದ್ದು, ಈಗ ಅನಕ್ಷರತೆ ನಿರ್ಮೂಲನೆಗೆ ಪಣತೊಟ್ಟಿದೆ ಎಂದು ಹೇಳಿದರು.
ಪ್ರಸಾದ್‍ರವರಿಂದ ಹಿಡಿದು ಇಲ್ಲಿಯವರೆಗೂ ರೋಟರಿ ಕ್ಲಬ್ ಚಿತ್ರದುರ್ಗ ಫೋರ್ಟ್‍ಗೆ 22 ಮಂದಿ ಅಧ್ಯಕ್ಷರುಗಳಾಗಿದ್ದಾರೆ. ಈಗಿನ ಅಧ್ಯಕ್ಷ ಅರುಣ್‍ಕುಮಾರ್‍ರವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಇದಕ್ಕೆ ಎಲ್ಲಾ ಸದಸ್ಯರುಗಳ ಸಹಕಾರವಿದೆ ಎಂದು ಗುಣಗಾನ ಮಾಡಿದರು.
ಆರ್.ಐ.ಡಿ3160 ಕೆ.ಮಧುಪ್ರಸಾದ್, ಎಲ್.ಬಿ.ನೀಲಕಂಠಯ್ಯ, ಪಿ.ಎಸ್.ಶಂಭುಲಿಂಗಪ್ಪ, ಮೆದೇಹಳ್ಳಿ ಗ್ರಾ.ಪಂ.ಅಧ್ಯಕ್ಷ ವಿಜಯಕುಮಾರ್, ವೈ.ಚಂದ್ರಶೇಖರಯ್ಯ, ಮಾಧುರಿಮಧುಪ್ರಸಾದ್, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್, ಹೆಚ್.ಎಸ್.ಸುಂದರ್‍ರಾಜ್, ರೋಟರಿ ಕ್ಲಬ್ ಅಧ್ಯಕ್ಷ ಜಿ.ಎ.ವಿಶ್ವನಾಥ್, ಎಂ.ಜೆ.ರಾಘವೇಂದ್ರ ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.
ಮಾರುತಿಮೋಹನ್, ಮಹಡಿಶಿವಮೂರ್ತಿ, ಪಿ.ಎಲ್.ಸುರೇಶ್‍ರಾಜು, ಆರತಿ ಮಹಡಿ ಶಿವಮೂರ್ತಿ, ಗಾಯತ್ರಿ ಶಿವರಾಂ, ರೋಟರಿ ಕ್ಲಬ್ ಚಿತ್ರದುರ್ಗಫೋರ್ಟ್, ರೋಟರಿ ಫೋರ್ಟ್ ಟ್ರಸ್ಟ್‍ನ ಸದಸ್ಯರುಗಳು ಇಪ್ಪತ್ತೈದನೆ ವರ್ಷದ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ದಿನದ ಸುದ್ದಿ
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣು ತುಂಬಿಸಿಕೊಂಡಿದ್ದಾರೆ.
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್ಕುಮಾರ್ ಪಾರ್ಕ್ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ
ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ.
ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಇಂದಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿಯೇ ಅಬ್ಬರಿಸಲಿದೆ.
ಇದೀಗ ಹವಾಮಾನ ಇಲಾಖೆ ಸೂಚನೆಯೊಂದನ್ನು ನೀಡಿದ್ದು, ಬೆಂಗಳೂರು ಜನರಿಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು. ವರದಿ ಪ್ರಕಾರ, ಬೆಂಗಳೂರಿನಲ್ಲಿ ಇನ್ನೂ 7 ದಿನ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದ ವೆರೆಗೆ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ5 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ5 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ5 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ