Connect with us

ರಾಜಕೀಯ

ಸಮುದಾಯ ಮರೆತ ಆಂಜನೇಯ ವಿರುದ್ಧ ಮಾದಿಗರ ಆಕ್ರೋಶ

Published

on

ಸುದ್ದಿದಿನ, ಚಿತ್ರದುರ್ಗ (ಅ. 08) : ಲೋಕಸಭಾ ಚುನಾವಣೆ ಆರಂಭದಲ್ಲೇ ಮಾಜಿ ಸಚಿವ ಎಚ್.ಆಂಜನೇಯ ಅವರ ವಿರುದ್ಧ ಮಾದಿಗ ಸಮುದಾಯದ ಆಕ್ರೋಶ ವ್ಯಕ್ತಪಡಿಸಿದೆ.

ಮಾಜಿ ಸಚಿವ ಎಚ್. ಆಂಜನೇಯ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡದೆ ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ, ಇದೇ ರೀತಿ ಮುಂದುವರೆದರೆ ಅವರ ವಿರುದ್ದ ಹೋರಾಟವನ್ನು ಮಾಡುವುದ್ದಲ್ಲದೆ ತಕ್ಕ ಪಾಠವನ್ನು ಕಲಿಸುವುದಾಗಿ ರಾಜ್ಯ ಮಾದಿಗ ಮಹಾ ಸಭಾ ಎಚ್ಚರಿಸಿದೆ.

ಚಿತ್ರದುರ್ಗ ನಗರದಲ್ಲಿ ಸೋಮವಾರ ಸಭೆಯನ್ನು ನಡೆಸಿದ ನಂತರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಸಭಾದ ರಾಜ್ಯಾಧ್ಯಕ್ಷ ಹನುಮಂತಪ್ಪ ದರ್ಗಾ ಅಂಜನೇಯ ಸಮಾಜದ ಹೆಸರನ್ನು ಹೇಳಿಕೊಂಡು ರಾಜಕೀಯ ಮಾಡಿ ಅಧಿಕಾರವನ್ನು ಪಡೆದು ಅದನ್ನು ಅನುಭವಿಸಿದರು ಆದರೆ ಸಮಾಜಕ್ಕೆ ಯಾವುದೇ ರೀತಿಯ ಉಪಯುಕ್ತವಾದ ಕಾರ್ಯಕ್ರಮಗಳಾಗಲಿ, ಯೋಜನೆಗಳಾಗಲಿ ಹಾಕಿಕೊಳ್ಳಲಿಲ್ಲ, ಇದರ ಬದಲಾಗಿ ಸಮಾಜದ ಆಸ್ತಿಗಳನ್ನು ಪಡೆಯುವ ಸಲುವಾಗಿ ಟ್ರಸ್ಟ್ರ್‍ಗಳನ್ನು ರಚನೆ ಮಾಡುವುದರ ಮೂಲಕ ಅದರಲ್ಲಿ ತಮಗೆ ಬೇಕಾದವರನ್ನು ಹಾಕಿಕೊಂಡು ಸರ್ಕಾರದಿಂದ ಅನುದಾನವನ್ನು ಪಡೆದು ಸ್ವಂತವಾಗಿ ಅಸ್ತಿಯನ್ನು ಮಾಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಸಮಾಜದ ಆಸ್ತಿ ಬೇರೆಯರ ಕೈಯಲ್ಲಿದೆ ಆದನ್ನು ಬಿಡಿಸಲಾಗಿದೆ ಹಾಗೇಯೇ ಬಿಟ್ಟಿದ್ದಾರೆ ಎಂದು ಆರೋಪಿಸಿದರು.

ಮಾದಿಗರಿಗೆ ಅನುಕೂಲವಾಗುವ ಸದಾಶಿವ ಆಯೋಗದ ವರದಿ ಜಾರಿಗಾಗಿ ಹಲವಾರು ಹೋರಾಟಗಳು, ಪ್ರತಿಭಟನೆಗಳು, ಧರಣ ಗಳು ನಡೆದಿದ್ದರು ಸಹಾ ಇದರ ಬಗ್ಗೆ ಅಧಿಕಾರದಲ್ಲಿದ್ಧಾಗ ಮಾತನಾಡದೇ ಜನಾಂಗದವರಿಗೆ ಮೋಸವನ್ನು ಮಾಡುತ್ತಾ ಇದ್ದ ಅಂಜನೇಯ ಈಗ ಮಾತ್ರ ಸದಾಶಿವ ಆಯೋಗದ ವರದಿ ಜಾರಿಯಾಗಬೇಕೆಂದು ಹೋರಾಟವನ್ನು ಮಾಡುತ್ತಿದ್ದಾರೆ ಇದೇ ಹೋರಾಟವನ್ನು ಅಂದು ಅಧಿಕಾರ ಇದ್ದಾಗ ಮಾಡಿದ್ದರೆ ಬೆಲೆ ಸಿಗುತ್ತಿತ್ತು ಈಗ ಸೋತಿದ್ದೇನೆ ಏನು ಕೆಲಸ ಇಲ್ಲ ಎಂದು ಸದಾಶಿವ ಆಯೋಗದ ವರದಿ ಅನುಷ್ಠಾನದ ಬಗ್ಗೆ ಮಾತನಾಡುತ್ತಿದ್ಧಾರೆ ಮಾಡುವ ಇಚ್ಚಾ ಶಕ್ತಿ ಇದ್ದರೆ ಅಧಿಕಾರದಲ್ಲಿದ್ದಾಗಲೆ ಮಾಡಬೇಕಿತ್ತು ಎಂದು ಹನುಮಂತಪ್ಪ ಟೀಕಿಸಿದ್ದಾರೆ.

ಈಗಾಗಲೇ ಜನಾಂಗದ ಮಠ ಇದ್ದರೂ ಸಹಾ ಬೇರೆಯವರ ಜೊತೆಗೂಡಿ ಮತ್ತೊಂದು ಮಠವನ್ನು ಮಾಡುವುದರೊಂದಿಗೆ ಜನಾಂಗದವರಲ್ಲಿ ಗೊಂದಲವನ್ನು ಮೂಡಿಸುವಂತೆ ಮಾಡಿದ್ದಾರೆ, ತಮ್ಮ ಅನುಕೂಲಕ್ಕೆ ತಕ್ಕಂತೆ ಜನಾಂಗ, ಸಮಾಜ ಮತ್ತು ಮಠಗಳನ್ನು ಅಂಜನೇಯ ಬಳಸಿಕೊಳ್ಳುತ್ತಿದ್ದಾರೆ, ಇದರ ಬಗ್ಗೆ ಸಮುದಾಯವರು ಎಚ್ಚರದಿಂದ ಇರುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿ, ಸರ್ಕಾರದ ಅನುದಾನವನ್ನು ಸಮಾಜದ ಅಭೀವೃದ್ದಿಗೆ ಬಳಕೆ ಮಾಡದೇ ಸ್ವಂತಕ್ಕೆ ಯಾವುದೇ ಹೆಸರಿಲ್ಲದ ಟ್ರಸ್ಟ್‍ಗೆ ಹಾಕುವುದರ ಮೂಲಕ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ ಎಂದು ದೂರಿದರು.

ಸಭಾದ ರಾಜ್ಯ ಸಂಚಾಲಕರಾದ ಪಾಂಡುರಂಗಪ್ಪ ಮಾತನಾಡಿ ಅಂಜನೇಯ ತಾವೊಬ್ಬರೆ ಹೋದರೆ ಜನಾಂಗದವರು ಮಾತು ಕೇಳುವುದಿಲ್ಲ ಎಂದು ಮನಗಂಡು ಕೇಂದ್ರದ ಮಾಜಿ ಸಚಿವ ಮುನಿಯಪ್ಪ ಮತ್ತು ತಿಮ್ಮಾಪುರರವರನ್ನು ಮುಂದಿಟ್ಟುಕೊಂಡು ಸಭೆಯನ್ನು ಮಾಡುವುದರ ಮೂಲಕ ಜನಾಂಗವನ್ನು ಗೊಂದಲಕ್ಕೆ ಈಡು ಮಾಡುತ್ತಿದ್ದಾರೆ ಎಂದರು.

ಸರ್ಕಾರ ಮಾದಿಗ ಅಭೀವೃದ್ದಿಗಾಗಿ ನಿಗಮವನ್ನು ಸ್ಥಾಪನೆ ಮಾಡಲು ಮುಂದಾಗಿತ್ತು ಅದರ ಹೆಸರನ್ನು ಆದಿಜಾಂಬವ ಅಭೀವೃದ್ದಿ ನಿಗಮ ಎಂದು ನಾಮಕರಣಕ್ಕೆ ಮುಂದಾಗಿದೆ ಆದರೆ ಮಹಾಸಭಾ ಇದನ್ನು ವಿರೋಧಿಸುತ್ತದೆ ಈ ರೀತಿಯ ಹೆಸರಿನಿಂದ ನಿಗಮವನ್ನು ಸ್ಥಾಪನೆ ಮಾಡುವುದು ಬೇಡ ಇದರ ಬದಲಾಗಿ ಮಾದಿಗ ನಿಗಮ ಎಂದು ಸ್ಥಾಪನೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಗೋಷ್ಟಿಯಲ್ಲಿ ಮಾದಿನ ಜನಾಂಗದ ಶಿವಮೂರ್ತಿ, ರಾಜಪ್ಪ, ಗಂಗಾಧರಪ್ಪ, ವಾಗೀಶ್ ಕುಮಾರ್ ರುದ್ರಮುನಿ, ಬಸವರಾಜಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ22 hours ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ3 days ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ3 days ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ5 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ6 days ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ1 week ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ1 week ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ1 week ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ2 weeks ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

Trending