ರಾಜಕೀಯ

ನಗರಸಭೆ ಮೀಸಲು ದಿಢೀರ್ ಬದಲಾವಣೆ: ಸರ್ಕಾರದ ನಿರ್ಧಾರಕ್ಕೆ ತಿಪ್ಪಾರೆಡ್ಡಿ ಅಸಮಾಧಾನ

Published

on

ಸುದ್ದಿದಿನ ಡೆಸ್ಕ್: ನಗರಸಭೆ ಫಲಿತಾಂಶ ಬೆನ್ನಲ್ಲೇ ಹಿಂದೆ ಪ್ರಕಟವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲು ಬದಲಾವಣೆವಾಗಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.

ಹಿಂದೆ ಪ್ರಕಟವಾಗಿದ್ದ ಮೀಸಲು ಪಟ್ಟಿಯಲ್ಲಿ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಬಿಸಿಎಂ ಮಹಿಳೆಗೆ ಮೀಸಲಾಗಿತ್ತು.

ಈಗ ಬದಲಾದ ಮೀಸಲು ಪಟ್ಟಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಈ ಬೆಳವಣಿಗೆಯಿಂದ ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಸರ್ಕಾರದ ವಿರುದ್ಧ ಶಾಸಕ ತಿಪ್ಪಾರೆಡ್ಡಿ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರಸಭೆ ಚುನಾವಣೆಯಲ್ಲಿ ಬಹುಮತ ಇಲ್ಲದ ಸಮ್ಮಿಶ್ರ ಸರ್ಕಾರ ಹಿಂದಿನ ಬಾಗಿಲ ಮೂಲಕ ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಆರೋಪಿಸಿದ್ದಾರೆ.

ಸರ್ಕಾರ ಯಾವುದೇ ವಾಮಮಾರ್ಗ ಅನುಸರಿಸಿದರೂ ಬಿಜೆಪಿ ಚಿತ್ರದುರ್ಗ ನಗರಸಭೆಯಲ್ಲಿ ಅಧಿಕಾರ ಸ್ಥಾಪಿಸಲು ಸಿದ್ಧವಾಗಿದೆ. ನಮಗೆ ಬೇಕಾದ ಸದಸ್ಯ ಬಲವಿದೆ ಎಂದು ಶಾಸಕ ತಿಪ್ಪಾರೆಡ್ಡಿ ಹೇಳಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version