ದಿನದ ಸುದ್ದಿ

ಚಿತ್ರದುರ್ಗ | ಕೊರೋನಾದಿಂದ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಬಸವರಾಜ್ ಕೋಟಿ‌ ಸಾವು

Published

on

ಸುದ್ದಿದಿನ,ಚಿತ್ರದುರ್ಗ: ಕೊರೊನಾದಿಂದ ಬಳಲುತ್ತಿದ್ದಪಬ್ಲಿಕ್ ಟಿವಿಯ ಕ್ಯಾಮೆರಾಮನ್ ಬಸವರಾಜ ಕೋಟಿ(45) ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬಸವರಾಜ ಕೋಟಿ ಕಳೆದ ಹತ್ತು ವರ್ಷಗಳಿಂದ ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಹದಿನೈದು ದಿನಗಳಿಂದ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ | ನಮ್ಮ ಶಿವಮೊಗ್ಗ – ನಮ್ಮ ಹೆಮ್ಮೆ : ಬಿದನೂರು ಕೋಟೆ

ಮೃತ ಬಸವರಾಜ ಕೋಟಿ ಅವರಿಗೆ ಹತ್ತು ವರ್ಷದ ಒಬ್ಬ ಪುತ್ರ ಮತ್ತು ಹನ್ನೆರಡು ವರ್ಷದ ಖುಷಿ ಎಂಬ ಇಬ್ಬರು ಮಕ್ಕಳು, ಪತ್ನಿ ಶಾಂತ ಸೇರಿದಂತೆ ಹೆತ್ತವರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version