ಲೈಫ್ ಸ್ಟೈಲ್
ಪಕ್ಕಾ ಚಾಕೊಲೇಟ್ ಗರ್ಲ್..!
ಚಾಕಲೇಟ್ ಯಾರಿಗೆ ತಾನೇ ಇಷ್ಟವಿಲ್ಲ. ಮಕ್ಕಳಿಂದ ವೃದ್ಧರು ಬಾಯಲ್ಲಿ ನೀರೂರಿಸುವ ಚಾಕಲೇಟ್ ಈಗ ಬ್ಯೂಟಿ ಪ್ರಪಂಚದಲ್ಲಿ ತನ್ನದೇ ಛಾಪು ಮೂಡಿಸಿದೆ. ಚಾಕಲೇಟ್ ಮೇಕಪ್ ಸದ್ಯ ಸೋಷಿಯಲ್ ಮೀಡಿಯಾ ದಲ್ಲಿ ಸದ್ದು ಮಾಡುತ್ತಿರುವ ಟ್ರೆಂಡ್ ಪಟ್ಟಿಗೆ ಸೇರ್ಪಡೆಯಾಗಿದೆ. ಬಾಯಿ ಚಪಲಕ್ಕೆ ತಿನ್ನುತ್ತಿದ್ದ ಚಾಕಲೇಟ್ ಈಗ ಮೇಕಪ್ ರೂಪ ಪಡೆದಿದೆ. ಯುವತಿಯರಿಗಂತೂ ಚಾಕಲೇಟ್ ಎಂದರೆ ಪಂಚಪ್ರಾಣ. ಈ ವೀಕ್ನೆಸ್ ಅರಿತ ಬ್ಯೂಟಿ ಎಕ್ಸ್ಪ್ರೆಟ್ಗಳು ಇದನ್ನೇ ಒಂದು ಟ್ರೆಂಡ್ ಆಗಿಸಿದ್ದಾರೆ. ಚಾಕಲೇಟ್ ವ್ಯಾಮೋಹ ವನ್ನು ಸರಿಯಾಗಿ ಬಳಸಿಕೊಂಡಿದ್ದಾರೆ ಸೌಂದರ್ಯ ತಗ್ನರು.. ಈಗಾಗಲೇ ಚಾಕಲೇಟ್ ವ್ಯಾಕ್ಸಿಂಗ್.. ಚಾಕಲೇಟ್ ಪೆಡಿಕ್ಯೂರ್.. ಚಾಕಲೇಟ್ ಮೆನಿಕ್ಯೂರ್.. ಚಾಕಲೇಟ್ ಫೇಷಿಯಲ್ ಗಳನ್ನು ನೋಡಿದ್ದೀವಿ..ಈಗ ಚಾಕಲೇಟ್ ಮೇಕಪ್ ಸರದಿ! ಚಾಕಲೇಟ್ ನಷ್ಷೇ ಚಾಕಲೇಟ್ ಬಣ್ಣ ಯುವತಿಯರಿಗೆ ಬಲು ಪ್ರೀತಿ..
ಚಾಕಲೇಟ್ ಲಿಪ್ಸ್ಟಿಕ್!
ಚಾಕಲೇಟ್ ಬಣ್ಣದ ಲಿಪ್ಸ್ಟಿಕ್ ಮಾರುಕಟ್ಟೆಯಲ್ಲಿ ಈಗಾಗಲೇ ಹಳೆಯದಾಗಿ ಹೋಗಿದೆ.. ಈಗ ಬಂದಿರುವ ಹೊಸ ಚಾಕಲೇಟ್ ಲಿಪ್ಸ್ಟಿಕ್ ಅನ್ನು ನೀವು ಧರಿಸುವುದಲ್ಲದೇ, ಸವಿಯಲು ಬಹುದು. ಈ ಲಿಪ್ಸ್ಟಿಕ್ ನ ವಿಶೇಷ ಅಡಗಿರುವುದೇ ಇಲ್ಲಿ..ಮಹಿಳೆಯರ ಲಿಪ್ಸ್ಟಿಕ್ ಮೋಹ ಅರಿತಿದ್ದ ಕಂಪನಿ ಒಂದು ತುರಿಯನ್ನು ಅಲಂಕರಿಸಿ, ಹಾಗೇ ವಿಯಲೂ ಬಹುದಾದ “ಎಡಿಬಲ್ ಚಾಕಲೇಟ್ ಲಿಪ್ಸ್ಟಿಕ್ “ಅನ್ನು ನವಂಬರ್ 2017 ರಲ್ಲಿ ಮಾರುಕಟ್ಟೆಗೆ ತಂದಿದೆ. ನಿಮ್ಮ ಪ್ರೀತಿ ಪಾತ್ರರಿಗೆ ಉಡುಗೊರೆ ನೀಡಲು ಅತ್ಯುತ್ತಮವಾಗಿದೆ. ಕೆಂಪು, ಗುಲಾಬಿ ಹಾಗೂ ಪಿಂಕ್ ಬಣ್ಣಗಳಲ್ಲಿ ಸದ್ಯ ಇವು ಲಭ್ಯವಿದೆ.
ಬ್ಯೂಟಿ ಬ್ಲಾಗರ್ಗಳು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಮೆಲ್ಟೆಡ್ ಚಾಕಲೇಟ್ ಅನ್ನು ತುಟಿಗಳಿಗೆ ಲಿಪ್ಸ್ಟಿಕ್ ನಂತೆ ಬಳಸಿ ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸುತ್ತಿದ್ದಾರೆ! ಒಟ್ಟಿನಲ್ಲಿ ಚಾಕಲೇಟ್ ಬಣ್ಣದ ಲಿಪ್ಸ್ಟಿಕ್ ಹಚ್ಚಿ ಕೊಳ್ಳುವುದು ಈ 2018ರ ಹೊಸ ಫ್ಯಾಷನ್ ಎನಿಸಿಕೊಂಡಿದೆ.
ಚಾಕಲೇಟ್ ನೈಲ್ ಆರ್ಟ್!
ತಿನ್ನೋಕೆ ಅಷ್ಟೇ ಅಲ್ಲ, ಕೈ ಉಗುರಿನ ಮೇಲೂ ಚಾಕಲೇಟ್ ಹೋಲುವ ನೈಲ್ ಆರ್ಟ್ ಮಾಡಲಾಗುತ್ತದೆ. ಇನ್ನು ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಚಾಕಲೇಟ್ ನ ಪುಟ್ಟ ಪುಟ್ಟ ಬಾಕ್ಸ್ ಹೋಲುವ ಚೌಕ ಗಳನ್ನು ಚಾಕಲೇಟ್ ನಲ್ಲಿಯೇ ಮೂಡಿಸುವ ಕ್ರೇಜ್ ಯುವತಿಯರ ಗಮನ ಸೆಳೆಯುತ್ತಿದೆ. ಕ್ಯಾಂಡಿ ನೈಲ್ ಆರ್ಟ್ ಟೀನೇಜರ್ ಗಳ ಎಂದಿಗೂ ಮಾಸದ ಫೇವರಿಟ್ ನೈಲ್ ಆರ್ಟ್ ಆಗಿದೆ. ಬಣ್ಣ ಬಣ್ಣದ ಕ್ಯಾಂಡಿ ಗಳನ್ನು ಉಗುರಿನ ಮೇಲೆ ರಚಿಸುವ ಫ್ಯಾಷನ್ ಈಗ ಬ್ಯೂಟಿ ಲೋಕದ ಹೊಸ ಟ್ರೆಂಡ್!
ಚಾಕಲೇಟ್ ಸ್ಮೋಕೀ ಐಸ್ !
ಕಣ್ಣಿನ ಆಕರ್ಷಣೆ ಹಚ್ಚಿಸಲು ಯುವತಿಯರು ಚಾಕಲೇಟ್ ಮೇಕಪ್ ನ ಮೊರೆ ಹೋಗುತ್ತಿದ್ದಾರೆ. ಫಾಡ ಬ್ರೌನ್ , ಬ್ರಾಂಜ್ , ಕಾಪರ್, ಗೋಲ್ಡ್ ಬಣ್ಣದ ಕಾಂಬಿನೇಷನ್ ಬಳಸಿ ಮಾಡಲಾಗುವ ಚಾಚಾಕಲೇಟ್ ಸ್ಮೋಕೀ ಐಸ್ ಮೇಕಪ್ , ಅಡ್ಡಿಗಳು ನಿದ್ದೆ ಕೆಡಿಸಿದೆ. ಕಣ್ಣಿನ ಆಕರ್ಷಣೆಯನ್ನು ದುಪ್ಪಟ್ಟು ಮಾಡುತ್ತಿದೆ ಈ ಚಾಕಲೇಟ್ ಐಸ್!
ರಾತ್ರಿ ಪಾರ್ಟಿ ಗಳಿಗೆ ಹೇಳಿಮಾಡಿಸಿದಂತಿದೆ ಈ ಲುಕ್. ಕಣ್ಣಿನಲ್ಲೇ ಕೊಲ್ಲುವ ಶಕ್ತಿ ಇದೆ ಈ ಚಾಕಲೇಟ್ ಲುಕ್ಕಿಗೆ. ರಾಂಪ್, ಫ್ಯಾಷನ್ ಷೋ, ಫೋಟೋ ಶೂಟ್ ಗಳಲ್ಲಿ ಈಗಾಗಲೇ ಸದ್ದು ಮಾಡುತ್ತಿದೆ ಈ ಚಾಕಲೇಟ್ ಮೇಕಪ್!
ಚಾಕಲೇಟ್ ಮೇಕಪ್!
ಸಾಮಾನ್ಯವಾಗಿ ಕೆಂಪು ಅಥವಾ ಗುಲಾಬಿ ಬಣ್ಣದ ಲಂಗನ್ನು ಕೆನ್ನೆಗೆ ಹೆಚ್ಚುವುದು ರೂಢಿ. ಆದರೆ ಚಾಕಲೇಟ್ ಮೇಕಪ್ ನಲ್ಲಿ ಫಾಡ ಬ್ರೌನ್ , ಬ್ರಾಂಜ್ , ಕಾಪರ್, ಗೋಲ್ಡ್ ಬಣ್ಣದ ಮಿಶ್ರಣ ವನ್ನು ಕೆನ್ನೆಗೆ ಹಚ್ಚಿ ಆಕರ್ಷಕ ಪಾರ್ಟಿ ಲುಕ್ ನೀಡಲಾಗುತ್ತಿದೆ. ಸೆಲಿಬ್ರಿಟಿಗಳು, ಮಾಡಲ್ಗಳು ಈ ಚಾಕಲೇಟ್ ಮೇಕಪ್ ಗೆ ಫುಲ್ ಫಿದಾ ಆಗಿದ್ದಾರೆ.
ಸ್ಟೈಲ್ ಟಿಪ್ಸ್!
1. ಚಾಕಲೇಟ್ ಮೇಕಪ್ ರಾತ್ರಿ ಪಾರ್ಟಿ ಹಾಗೂ ರಾಂಪ್ ಗಳಲ್ಲಿ ಹೆಚ್ಚು ಸೂಕ್ತ ಎನಿಸುತ್ತದೆ. ಸೀಕ್ವಿನ್ (ಚಮಕಿ) ಉಡುಪುಗಳೊಂದಿಗೆ ಈ ಮೇಕಪ್ ನಿಮ್ಮ ಸ್ಟೈಲ್ ಸ್ಟೇಟ್ಮೆಂಟನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗುತ್ತದೆ.
2. ಡಸ್ಕಿ ಲುಕ್ ನೀಡುವಲ್ಲಿ ಈ ಮೇಕಪ್ ಬಿಳಿ.. ಕಪ್ಪು.. ಚಾಕಲೇಟ್ ಬಣ್ಣದ ಉಡುಪುಗಳೊಂದಿಗೆ ಸರಿ ಹೊಂದುತ್ತದೆ.
3.ಚಾಕಲೇಟ್ ನೈಲ್ ಆರ್ಟ್ ಎಲ್ಲ ಬಣ್ಣದ ಹಾಗೂ ಎಲ್ಲಾ ರೀತಿಯ ಉಡುಪುಗಳೊಂದಿಗೆ ಮ್ಯಾಚ್ ಆಗುತ್ತದೆ. ಸಮಾರಂಭ ಗಳಲ್ಲಿ ನಿಮ್ಮಸ್ಟೈಲ್ ಸ್ಟೇಟ್ಮೆಂಟ್ಅನ್ನು ಇದು ತೋರ್ಪಡಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ1 day agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ6 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ





