ದಿನದ ಸುದ್ದಿ

ಸಿಪೆಟ್ ಸಂಸ್ಥೆ | ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ರಾಯಚೂರು : ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು 2022-23ನೇ ಸಾಲಿನ ಉದ್ಯೋಗಾದಾರಿತ ಮತ್ತು 100% ಉದ್ಯೋಗ ಖಚಿತ ಡಿಪ್ಲೊಮಾ, ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು, ಸಂಸ್ಥೆಯು ದೇಶದ ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುವುದು.

ಕೊರ್ಸ್ಗಳು: ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ 3ವರ್ಷದ ಕೋರ್ಸ್, ಮತ್ತು ಪೋಸ್ಟ್ ಗ್ರ‍್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ 2 ವರ್ಷದ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಎಸ್.ಎಸ್.ಎಲ್.ಸಿ, ಪಿ.ಯು.ಸಿ (ವಿಜ್ಞಾನ) ಮತ್ತು ಬಿ.ಎಸ್.ಸ್ಸಿ ತೇರ್ಗಡೆಯಾಗಿರಬೇಕು. ಜೂ.5ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ https://cipet2022.onlineregistrationform.org/CIPET/ ಅಥವಾ 0821-2510618, 9791431827, 9466585669, 9480253024ಗೆ ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ಆರ್.ಟಿ. ನಾಗರಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version