ದಿನದ ಸುದ್ದಿ
ನಾಳೆಯಿಂದ ಸಂಪೂರ್ಣವಾಗಿ ತ್ಯಾಜ್ಯ ವಿಲೇವಾರಿ ಸ್ಥಗಿತಕ್ಕೆ ಪೌರಕಾರ್ಮಿಕರ ಕರೆ
ಸುದ್ದಿದಿನ,ಬೆಂಗಳೂರು: ವಿವಿಧ ಬೇಡಿಕೆಗಾಗಿ ಪೌರಕಾರ್ಮಿಕರ ನಡೆಸುತ್ತಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ನಾಳೆಯಿಂದ ಸಂಪೂರ್ಣವಾಗಿ ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸುವಂತೆ ಪೌರಕಾರ್ಮಿಕರು ಕರೆ ನೀಡಿದ್ದಾರೆ.
ರಾಜಧಾನಿಯ ಫ್ರೀಡಂ ಪಾರ್ಕ್ ಸೇರಿದಂತೆ ರಾಜ್ಯದ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಕಳೆದ ಎರಡು ದಿನಗಳಿಂದ ಕರ್ನಾಟಕ ರಾಜ್ಯದ ನಗರಪಾಲಿಕೆ, ಪುರಸಭೆ, ನಗರಸಭೆ, ಪೌರಕಾರ್ಮಿಕ ಮಹಾಸಂಘ ನೇತೃತ್ವದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ಮಾಡುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243