ದಿನದ ಸುದ್ದಿ
ಪೌರಕಾರ್ಮಿಕರ ಹೋರಾಟಕ್ಕೆ ಕೈಜೋಡಿಸಿದ ಆಮ್ ಆದ್ಮಿ ಪಾರ್ಟಿ
ಸುದ್ದಿದಿನ ಡೆಸ್ಕ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಕೈಜೋಡಿಸಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ಆಮ್ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ಪೌರ ಕಾರ್ಮಿಕರನ್ನು ಚುನಾವಣೆಗೆ ನಿಲ್ಲಿಸಿ, ಶಾಸಕರನ್ನಾಗಿ ಮಾಡಿದೆ. ಈ ಮೂಲಕ ಪೌರ ಕಾರ್ಮಿಕರ ಭಾವನೆಗಳಿಗೆ ರಾಜಕೀಯ ಬಲ ದೊರಕಿಸಿಕೊಟ್ಟಿದೆ. ಆದರೆ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಗೆ ಪೌರಕಾರ್ಮಿಕರ ನೋವುಗಳನ್ನು ಕಾಣಿಸುತ್ತಿಲ್ಲ. ಪೌರ ಕಾರ್ಮಿಕರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸದೇ ಬಿಜೆಪಿ ಸರ್ಕಾರವು ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಹೇಳಿದರು.
“ಪೌರಕಾರ್ಮಿಕರಿಗೆ ಸರ್ಕಾರವು ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು, ಸಮಾನ ಕೆಲಸಕ್ಕೆ ಸಮಾನ ವೇತನ, ಗ್ರಾಚ್ಯುಟಿ, ಹೆರಿಗೆ ಭತ್ಯೆ, ರಜಾ ದಿನಗಳನ್ನು ನೀಡಬೇಕು. ಅವರನ್ನು ನೇರ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆ ಬರಬೇಕು. ಜೊತೆಗೆ, ಅಗತ್ಯವಿರುವಲ್ಲಿ ಅವರಿಗಾಗಿ ಶೌಚಾಲಯ ನಿರ್ಮಾಣ ಮಾಡಬೇಕು. ಅವರಿಗೆ ರಜಾ ಸೌಲಭ್ಯ ನೀಡಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಹಣ ನೀಡಬೇಕು. ಸರ್ಕಾರವು ಇನ್ನಾದರೂ ಈ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಬಗ್ಗೆ ಗಮನ ನೀಡಬೇಕು” ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಮಾತನಾಡಿ, “ಪ್ರತಿಭಟನಾನಿರತ ಪೌರಕಾರ್ಮಿಕರಿಗೆ ಆಮ್ ಆದ್ಮಿ ಪಾರ್ಟಿಯ ಸಂಪೂರ್ಣ ಬೆಂಬಲವಿದೆ. ಒಂದು ದಿನ ಪೌರ ಕಾರ್ಮಿಕರು ಕೆಲಸಕ್ಕೆಂದು ರಸ್ತೆಗಿಳಿಯದೇ ಹೋದರೆ ತ್ಯಾಜ್ಯ ವಿಲೇವಾರಿ ಸಮಸ್ಯೆ ಉಲ್ಭಣಗೊಂಡು ಜನ ಮೂಗು ಮುಚ್ಚಿಕೊಂಡು ಓಡಾಡಬೇಕಾಗುತ್ತದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಅಲ್ಪ ಪ್ರಮಾಣದ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವರನ್ನು ಖಾಯಂ ನೇಮಕಾತಿ ಮಾಡಬೇಕು” ಎಂದು ಆಗ್ರಹಿಸಿದರು.
“2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪೌರಕಾರ್ಮಿಕರ ಖಾಯಮಾತಿಗೆ ಕೇವಲ ಅನುಮೋದನೆ ನೀಡಿತೇ ಹೊರತು ಅನುಷ್ಠಾನಕ್ಕೆ ತರಲಿಲ್ಲ. ಬಳಿಕ ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳು ಕೂಡ ಈ ಬಗ್ಗೆ ಗಮನಹರಿಸಲಿಲ್ಲ. ಪೌರಕಾರ್ಮಿಕರ ವಿಶೇಷ ನೇಮಕಾತಿ ನಿಯಮ 2017ರಲ್ಲಿ ರಸ್ತೆ ಸ್ವಚ್ಛಗೊಳಿಸುವವರನ್ನು ಮಾತ್ರ ಪೌರಕಾರ್ಮಿಕರೆಂದು ಪರಿಗಣಿಸಲಾಗಿದೆ. ಒಳಚರಂಡಿ ಶುಚಿಗೊಳಿಸುವ ಕಾರ್ಮಿಕರು, ಕಸ ತೆಗೆಯುವವರು, ಕಸದ ಲಾರಿ ಚಾಲಕರು, ಕಸ ಲೋಡ್ ಮಾಡುವವರು, ಸಹಾಯಕರು ಗುತ್ತಿಗೆ ಆಧಾರದಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಅವರಿಗೂ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು” ಎಂದು ಭಾಸ್ಕರ್ ರಾವ್ ಒತ್ತಾಯಿಸಿದರು.
ಆಮ್ ಆದ್ಮಿ ಪಾರ್ಟಿ ಮುಖಂಡರಾದ ಮೋಹನ್ ದಾಸರಿ, ಜಗದೀಶ್ ವಿ ಸದಂ, ಮುಕುಂದ್ ಗೌಡ, ಜ್ಯೋತೀಶ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ4 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

