Connect with us

ದಿನದ ಸುದ್ದಿ

ಪೌರಕಾರ್ಮಿಕರ ಹೋರಾಟಕ್ಕೆ ಕೈಜೋಡಿಸಿದ ಆಮ್‌ ಆದ್ಮಿ ಪಾರ್ಟಿ

Published

on

ಸುದ್ದಿದಿನ ಡೆಸ್ಕ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪೌರಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪಕ್ಷದ ಮುಖಂಡರು ಕೈಜೋಡಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ಆಮ್‌ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ಪೌರ ಕಾರ್ಮಿಕರನ್ನು ಚುನಾವಣೆಗೆ ನಿಲ್ಲಿಸಿ, ಶಾಸಕರನ್ನಾಗಿ ಮಾಡಿದೆ. ಈ ಮೂಲಕ ಪೌರ ಕಾರ್ಮಿಕರ ಭಾವನೆಗಳಿಗೆ ರಾಜಕೀಯ ಬಲ ದೊರಕಿಸಿಕೊಟ್ಟಿದೆ. ಆದರೆ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಗೆ ಪೌರಕಾರ್ಮಿಕರ ನೋವುಗಳನ್ನು ಕಾಣಿಸುತ್ತಿಲ್ಲ. ಪೌರ ಕಾರ್ಮಿಕರು ಪದೇಪದೇ ಪ್ರತಿಭಟನೆ ನಡೆಸುತ್ತಿದ್ದರೂ ಸ್ಪಂದಿಸದೇ ಬಿಜೆಪಿ ಸರ್ಕಾರವು ಮೊಂಡುತನ ಪ್ರದರ್ಶಿಸುತ್ತಿದೆ” ಎಂದು ಹೇಳಿದರು.

“ಪೌರಕಾರ್ಮಿಕರಿಗೆ ಸರ್ಕಾರವು ಸುರಕ್ಷತಾ ಕವಚಗಳು, ನಿವೃತ್ತಿ ಸೇವಾ ಸೌಲಭ್ಯಗಳು, ಸಮಾನ ಕೆಲಸಕ್ಕೆ ಸಮಾನ ವೇತನ, ಗ್ರಾಚ್ಯುಟಿ, ಹೆರಿಗೆ ಭತ್ಯೆ, ರಜಾ ದಿನಗಳನ್ನು ನೀಡಬೇಕು. ಅವರನ್ನು ನೇರ ನೇಮಕಾತಿ ಮಾಡಿಕೊಳ್ಳುವ ವ್ಯವಸ್ಥೆ ಬರಬೇಕು. ಜೊತೆಗೆ, ಅಗತ್ಯವಿರುವಲ್ಲಿ ಅವರಿಗಾಗಿ ಶೌಚಾಲಯ ನಿರ್ಮಾಣ ಮಾಡಬೇಕು. ಅವರಿಗೆ ರಜಾ ಸೌಲಭ್ಯ ನೀಡಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಹಣ ನೀಡಬೇಕು. ಸರ್ಕಾರವು ಇನ್ನಾದರೂ ಈ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸುವ ಬಗ್ಗೆ ಗಮನ ನೀಡಬೇಕು” ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಾತನಾಡಿ, “ಪ್ರತಿಭಟನಾನಿರತ ಪೌರಕಾರ್ಮಿಕರಿಗೆ ಆಮ್‌ ಆದ್ಮಿ ಪಾರ್ಟಿಯ ಸಂಪೂರ್ಣ ಬೆಂಬಲವಿದೆ. ಒಂದು ದಿನ ಪೌರ ಕಾರ್ಮಿಕರು ಕೆಲಸಕ್ಕೆಂದು ರಸ್ತೆಗಿಳಿಯದೇ ಹೋದರೆ ತ್ಯಾಜ್ಯ ವಿಲೇವಾರಿ ಸಮಸ್ಯೆ ಉಲ್ಭಣಗೊಂಡು ಜನ ಮೂಗು ಮುಚ್ಚಿಕೊಂಡು ಓಡಾಡಬೇಕಾಗುತ್ತದೆ. ಸಫಾಯಿ ಕರ್ಮಾಚಾರಿ, ಸ್ವೀಪರ್ ಸೇರಿದಂತೆ ಪೌರಕಾರ್ಮಿಕರಿಗೆ ಅಲ್ಪ ಪ್ರಮಾಣದ ವೇತನ ನೀಡಲಾಗುತ್ತಿದೆ. ಇದರಿಂದ ಮೂಲ ಅಗತ್ಯಗಳನ್ನು ಈಡೇರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅವರನ್ನು ಖಾಯಂ ನೇಮಕಾತಿ ಮಾಡಬೇಕು” ಎಂದು ಆಗ್ರಹಿಸಿದರು.

“2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪೌರಕಾರ್ಮಿಕರ ಖಾಯಮಾತಿಗೆ ಕೇವಲ ಅನುಮೋದನೆ ನೀಡಿತೇ ಹೊರತು ಅನುಷ್ಠಾನಕ್ಕೆ ತರಲಿಲ್ಲ. ಬಳಿಕ ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳು ಕೂಡ ಈ ಬಗ್ಗೆ ಗಮನಹರಿಸಲಿಲ್ಲ. ಪೌರಕಾರ್ಮಿಕರ ವಿಶೇಷ ನೇಮಕಾತಿ ನಿಯಮ 2017ರಲ್ಲಿ ರಸ್ತೆ ಸ್ವಚ್ಛಗೊಳಿಸುವವರನ್ನು ಮಾತ್ರ ಪೌರಕಾರ್ಮಿಕರೆಂದು ಪರಿಗಣಿಸಲಾಗಿದೆ. ಒಳಚರಂಡಿ ಶುಚಿಗೊಳಿಸುವ ಕಾರ್ಮಿಕರು, ಕಸ ತೆಗೆಯುವವರು, ಕಸದ ಲಾರಿ ಚಾಲಕರು, ಕಸ ಲೋಡ್ ಮಾಡುವವರು, ಸಹಾಯಕರು ಗುತ್ತಿಗೆ ಆಧಾರದಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಅವರಿಗೂ ಸರ್ಕಾರದ ಸೌಲಭ್ಯಗಳು ಸಿಗುವಂತಾಗಬೇಕು” ಎಂದು ಭಾಸ್ಕರ್‌ ರಾವ್‌ ಒತ್ತಾಯಿಸಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಮೋಹನ್‌ ದಾಸರಿ, ಜಗದೀಶ್‌ ವಿ ಸದಂ, ಮುಕುಂದ್‌ ಗೌಡ, ಜ್ಯೋತೀಶ್‌ ಕುಮಾರ್‌ ಮತ್ತಿತರರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending