ದಿನದ ಸುದ್ದಿ
ನಾಗರಿಕ ಸೇವಾ ದಿನ | ಸಾರ್ವಜನಿಕ ಆಡಳಿತ ಶ್ರೇಷ್ಠತಾ ಪ್ರಶಸ್ತಿ ಪ್ರದಾನ
ಸುದ್ದಿದಿನ ಡೆಸ್ಕ್ : ಇಂದು ದೇಶಾದ್ಯಂತ ನಾಗರಿಕ ಸೇವಾ ದಿನ ಆಚರಿಸಲಾಗುತ್ತಿದೆ. ಈ ದಿನದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 2021ನೇ ಸಾಲಿನ ಸಾರ್ವಜನಿಕ ಆಡಳಿತ ಶ್ರೇಷ್ಠತಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಗಳು, ಸಂಸ್ಥೆಗಳು ಮತ್ತು ಜಿಲ್ಲೆಗಳು ಜನರ ಕಲ್ಯಾಣಕ್ಕಾಗಿ ಮಾಡಿರುವ ಅಸಾಧಾರಣ ಮತ್ತು ಹೊಸತನದ ಸೇವೆಗಳನ್ನು ಗುರುತಿಸಿ, ಈ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಈ ವರ್ಷ 5 ಆದ್ಯತಾ ಕಾರ್ಯಕ್ರಮಗಳನ್ನು ಗುರುತಿಸಿ 10ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅದರಲ್ಲಿಯೇ 6ಪ್ರಶಸ್ತಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಸ್ಥೆಗಳು ಮತ್ತು ಜಿಲ್ಲೆಗಳನ್ನು ಗುರುತಿಸಿ ನೀಡಲಾಗುತ್ತಿದೆ.
ಎರಡು ದಿನಗಳ ನಾಗರಿಕ ಸೇವಾ ದಿನ ಆಚರಣೆಗೆ ದೆಹಲಿಯಲ್ಲಿಂದು ಚಾಲನೆ ನೀಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಮಾತನಾಡಿ, ಸರ್ಕಾರಗಳ ಮಹತ್ವಕಾಂಕ್ಷಿ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಕಾರ್ಯಕ್ಷಮತೆ ಗುರುತಿಸಿ ಈ ಬಾರಿ ಸಾರ್ವಜನಿಕ ಆಡಳಿತದ ಪ್ರಧಾನಮಂತ್ರಿ ಶ್ರೇಷ್ಠತಾ ಪ್ರಶಸ್ತಿ ನೀಡಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243