ದಿನದ ಸುದ್ದಿ
ದ್ರಾಕ್ಷಿ, ಈರುಳ್ಳಿ ರೈತರ ಸಂಕಷ್ಟದ ವಿಡಿಯೋ ವೈರಲ್ : ನೆರವಿಗೆ ಮುಂದಾದ ಸಿಎಂ
ಸುದ್ದಿದಿನ, ಬೆಂಗಳೂರು : ಮಳೆ ಹಾಗೂ ಬಿರುಗಾಳಿಯಿಂದ ದ್ರಾಕ್ಷಿ ಬೆಳೆಗೆ ಹಾನಿಯಾಗಿದ್ದ ದೇವನಹಳ್ಳಿ ತಾಲ್ಲೂಕು ವೆಂಕಟಗಿರಿ ಕೋಟೆಯ ರೈತ ಮತ್ತು ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದ ಗದಗ ಜಿಲ್ಲೆ ಮುಂಡರಗಿ ತಾಲ್ಲೂಕಿನ ರೈತನ ನೆರವಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮುಂದಾಗಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರು ರೈತನನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದ್ದಾರೆ.
ಗದಗ ಜಿಲ್ಲಾಧಿಕಾರಿ ಹಿರೇಮಠ ಅವರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು, ರೈತನನ್ನು ಭೇಟಿ ಮಾಡಿ ಈರುಳ್ಳಿಗೆ ಉತ್ತಮ ಬೆಲೆ ಸಿಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243