ದಿನದ ಸುದ್ದಿ
ದಕ್ಷತೆ, ಸಮಯ ಬದ್ಧತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ಹಲವಾರು ಸಚಿವರು ಹಾಗೂ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ದಕ್ಷತೆಯಿಂದ ಹಾಗೂ ಸಮಯಬದ್ಧವಾಗಿ ಕಾರ್ಯನಿರ್ವಹಿಸಬೇಕು ವಿಶೇಷವಾಗಿ ಜನರ ಆರೋಗ್ಯ ರಕ್ಷಣೆ, ಶಿಕ್ಷಣ, ಪೌಷ್ಠಿಕ ಆಹಾರ ಒದಗಿಸುವುದು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಈ ಬಾರಿಯ ಬಜೆಟ್ ನಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಈ ಜಿಲ್ಲೆಗಳಲ್ಲಿ 7ಸಾವಿರ ಶಾಲಾ ಕಟ್ಟಡ, 4 ಸಾವಿರ ಅಂಗನವಾಡಿ ಕೇಂದ್ರಗಳು ಹಾಗೂ ಮನೆಗಳ ನಿರ್ಮಾಣಕ್ಕೆ ಕಾರ್ಯಕ್ರಮ ರೂಪಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಸಮರ್ಪಣಾ ಭಾವದಿಂದ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243