ದಿನದ ಸುದ್ದಿ
ಇದು ಆಸ್ಪತ್ರೆ ಇಲ್ಲದ ಊರು, ನಿಧಾನವಾಗಿ ಚಲಿಸಿ : ಗ್ರಾಮಸ್ಥರಿಂದ ಸಿಎಂಗೆ ಎಚ್ಚರಿಕೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/04/suddidina_cm_shrugeri.jpg&description=ಇದು ಆಸ್ಪತ್ರೆ ಇಲ್ಲದ ಊರು, ನಿಧಾನವಾಗಿ ಚಲಿಸಿ : ಗ್ರಾಮಸ್ಥರಿಂದ ಸಿಎಂಗೆ ಎಚ್ಚರಿಕೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/04/suddidina_cm_shrugeri.jpg&description=ಇದು ಆಸ್ಪತ್ರೆ ಇಲ್ಲದ ಊರು, ನಿಧಾನವಾಗಿ ಚಲಿಸಿ : ಗ್ರಾಮಸ್ಥರಿಂದ ಸಿಎಂಗೆ ಎಚ್ಚರಿಕೆ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಚಿಕ್ಕಮಗಳೂರು: ಇದು ಆಸ್ಪತ್ರೆ ಇಲ್ಲದ ಊರು, ನಿಧಾನವಾಗಿ ಚಲಿಸಿ ಮುಖ್ಯಮಂತ್ರಿಗಳೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬ್ಯಾನರ್ ಮೂಲಕ ಸ್ವಾಗತ ಕೋರಿರುವ ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.
ಮಂಗಳವಾರ ಶೃಂಗೇರಿ ಹಾಗೂ ಹರಿಹರಪುರ ಮಠಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿದ್ದರು. ಈ ಸಂದರ್ಭ ಅವರು ಶೃಂಗೇರಿಯ ಮೆಣಸೆ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ನಿಂದ ಕಾರಿನಲ್ಲಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ʻಇದು ಆಸ್ಪತ್ರೆ ಇಲ್ಲದ ಊರು, ಮುಖ್ಯಮಂತ್ರಿಗಳೇ ನಿಧಾನವಾಗಿ ಚಲಿಸಿʼ ಎಂದು ಬ್ಯಾನರ್ ಕಟ್ಟಿ ಗ್ರಾಮಸ್ಥರು ಟೀಕೆಗೊಳಪಡಿಸಿದರು.
ಸುಮಾರು 15 ವರ್ಷಗಳಿಂದ ನಾವು ಆಸ್ಪತ್ರೆಗಾಗಿ ಹೋರಾಡುತ್ತಿದ್ದೇವೆ. ಸರ್ಕಾರ ಬರೀ ಭರವಸೆ ನೀಡುತ್ತಿದೆ. ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಶೃಂಗೇರಿಯಲ್ಲಿ 100 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಹಾಗೂ ಇಲಾಖೆಯಿಂದ ಮಂಜೂರಾತಿ ಮಾಡಿಸುವುದು ನಮ್ಮ ಕೆಲಸ ಎಂದು ಮನವಿ ಸ್ವೀಕರಿಸಿದ ಬಳಿಕ ಹೇಳಿದರು.
ಸ್ಥಳದ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು, ಸ್ಥಳ ಸಿಕ್ಕಕೂಡಲೇ ಕಾಮಗಾರಿ ಆರಂಭಿಸುತ್ತೇವೆ.
ಆದಷ್ಟು ಬೇಗೇ ಅದಕ್ಕೆ ಸ್ಥಳ ಮಂಜೂರಾತಿ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನರಿಗೆ ಭರವಸೆಯನ್ನು ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ16 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

