ದಿನದ ಸುದ್ದಿ
ವಾಸ್ತವಾಂಶದ ಆಧಾರದ ಮೇಲೆ ಪಠ್ಯ ಪರಿಷ್ಕರಣೆ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ವಾಸ್ತವಾಂಶದ ಆಧಾರದ ಮೇಲೆ ಪಠ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬಸವಣ್ಣನವರ ವಚನ ಸಾಹಿತ್ಯ ಉತ್ಕೃಷ್ಟವಾದದು. ನಾಡಿನ ಮಠಾಧೀಶರ, ಅಭಿಪ್ರಾಯ ಪಡೆದು ಬಸವಣ್ಣನವರ ನಿಜ ಇತಿಹಾಸವನ್ನು ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243