ದಿನದ ಸುದ್ದಿ
ಕಾನೂನು ಕೈಗೆತ್ತಿಕೊಂಡರೆ ಕೂಡಲೇ ಕ್ರಮ : ಸಿಎಂ ಬೊಮ್ಮಾಯಿ
ಸುದ್ದಿದಿನ, ಮಂಗಳೂರು : ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಂಡರೆ ನಾವು ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಪ್ರಚೋದನೆ ಮಾಡಲು ಮುಂದಾಗುತ್ತಿದ್ದಾರೆ. ಅಂಥವರ ಮೇಲೆ ನಿಗಾ ಇಡಲು ಪೊಲೀಸರಿಗೆ ಸೂಚಿಸಲಾಗಿದೆ.
ಎಲ್ಲ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಧಾರವಾಡ, ಶಿವಮೊಗ್ಗ, ಕೋಲಾರ ಸೇರಿದಂತೆ ಎಲ್ಲೆಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಪ್ರಯತ್ನಗಳು ನಡೆದಿವೆಯೋ ಅಲ್ಲ್ಲೆಲ್ಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243