ದಿನದ ಸುದ್ದಿ
ಪತ್ರಿಕಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಸಚಿವ ಬಿ. ಶ್ರೀರಾಮುಲು, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆಯುಕ್ತ ಡಾ. ಪಿ.ಎಸ್. ಹರ್ಷ, ಮಾಧ್ಯಮ ಅಕಾಡೆಮಿ ಪದಾಧಿಕಾರಿಗಳು ಹಾಗೂ ಪ್ರೆಸ್ ಕ್ಲಬ್‌ನ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಪತ್ರಿಕಾ ದಿನಾಚರಣೆ ಆಚರಿಸಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಅವರನ್ನು ಸ್ಮರಿಸಲಾಯಿತು.
ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಬೆಂಗಳೂರು ಪ್ರೆಸ್ ಕ್ಲಬ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
1/2 pic.twitter.com/YKgcO0OWPc— CM of Karnataka (@CMofKarnataka) July 1, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243