ದಿನದ ಸುದ್ದಿ

ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ನಿವೃತ್ತಿ?

Published

on

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸರ್ಕಾರದ ಅವಧಿ ಮುಗಿದ ಬಳಿಕ ರಾಜಕೀಯ ನಿವೃತ್ತಿ ಹೊಂದಲಿದ್ದಾರೆ ಎಂಬ ಸುಳಿವನ್ನು ಅವರ ಆಪ್ತರ ವಲಯ ಬಹಿರಂಗ ಪಡಿಸಿದ್ದು, ಚುನಾವಣೆಗಳಿಂದ ದೂರವಿದ್ದು ಪಕ್ಷದ ಸಂಘಟನೆಯಲ್ಲಿ ತೊಡಗಹಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರದ ಶ್ರೀದೇವಿ ಪ್ಯಾಲೇಸ್‌ನಲ್ಲಿ ಭಾನುವಾರ ನಡೆದ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಲದಿನಗಳ ಹಿಂದೆ ಭೇಟಿಯಾಗಿದ್ದಾಗ ಅವರೇ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಬಯಸಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ಮೂರುವರೆ ವರ್ಷ ಮುಖ್ಯಮಂತ್ರಿಯಾಗಿ ರೈತರ, ರ್ದುಬಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಬಳಿಕ ನಾನು ಚುನಾವಣೆ ರಾಜಕೀಯದಿಂದ ದೂರವಿರುತ್ತೇನೆ ಎಂದು ಹೇಳಿದ್ದರು. ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾರು ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿರುವುದಗಿ ತಿಳಿಸಿದ್ದಾರೆ.

Trending

Exit mobile version