ದಿನದ ಸುದ್ದಿ

ಸಿಎಂ ಯಡಿಯೂರಪ್ಪ ವಿಶೇಷ ಪ್ಯಾಕೆಜ್ | ಯಾರಿಗೆ ಎಷ್ಟು ಸಹಾಯಧನ..? ಸಾಲ ಮರುಪಾವತಿಗೆ ಮೂರು ತಿಂಗಳ ಅವಕಾಶ

Published

on

ಬುಧವಾರದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಯಡಿಯೂರಪ್ಪ

ಸುದ್ದಿದಿನ,ಬೆಂಗಳೂರು : ಕೊರೋನಾ ವೈರಸ್ ಎರಡನೇ ಅಲೆಯ ದುಷ್ಪರಿಣಾಮ ಜನತೆ ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿ‌ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ಅನ್ನು ಬುಧವಾರ ಘೋಷಣೆ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ಲಾಕ್ ಡೌನ್ ಅನ್ನು ಘೋಷಣೆ ಸರ್ಕಾರ ಮಾಡಿದೆ. ಕೆಲವು ಅಗತ್ಯ ವಸ್ತುಗಳ ಖರೀದಿಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನಾವು ನೀಡಿದ್ದೇವೆ ಎಂದರು.

ಇದನ್ನೂ ಓದಿ | ಮಕ್ಕಳಲ್ಲಿ ಖಿನ್ನತೆ ಮತ್ತು ಆತಂಕದ ಚಿಹ್ನೆಗಳನ್ನು ನಿರ್ಲಕ್ಷಿಸದೇ ವೈದ್ಯರನ್ನು ಭೇಟಿ ಮಾಡಿ

ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು 1, 250 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದರು. ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ತಲಾ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಅಗಸ, ಚಮ್ಮಾರ, ಕಮ್ಮಾರ ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ 2 ಸಾವಿರ, ಆಟೋ ಮತ್ತು ಕ್ಯಾಬ್ ಚಾಲಕ 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ, ರಸ್ತೆ ಬದಿಯ ವ್ಯಾಪಾರಿಗಳಿಗೆ 2 ಸಾವಿರ, ಕಲಾವಿದರು, ಕಲಾ ತಂಡಕ್ಕೆ 3 ಸಾವಿರ ಹಾಗೂ ಸಾಲ ಮರುಪಾವತಿಗೆ 3 ತಿಂಗಳ ಅವಕಾಶ ಇದ್ದು, 3 ತಿಂಗಳ ಬಡ್ಡಿ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version