ರಾಜಕೀಯ
ಕುಮಾರಸ್ವಾಮಿ ವಿರುದ್ಧ ಮತ್ತೊಂದು ಆರೋಪ : ಏನದು ಓದಿ
ಬೆಳಗಾವಿಯಲ್ಲಿರುವ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ (ಕೆಶಿಪ್) ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಆದೇಶ ನೀಡಿದ್ದಾರೆ. ಜೊತೆಗೆ ಸಕಲೇಶಪುರ ಮತ್ತು ಬಸವನ ಬಾಗೇವಾಡಿಯಲ್ಲಿರುವ ಉಪವಿಭಾಗ ಕಚೇರಿಗಳನ್ನು ಕ್ರಮೇಣ ಹೊಳೆನರಸೀಪುರ ಹಾಗೂ ಬೇಲೂರಿಗೆ ಸ್ಥಳಾಂತರ ಮಾಡಲು ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿನ ಹಲವು ಕಚೇರಿಗಳನ್ನು ಬೆಳಗಾವಿಗೆ ವರ್ಗಾಯಿಸುವ ಕುರಿತು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ಅದರ ವಿರುದ್ಧವಾಗಿ ನಡೆದುಕೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.