ದಿನದ ಸುದ್ದಿ
ನ.23 ರಂದು ‘3 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ’ ಮಾಡಲಿದ್ದಾರೆ ಎಚ್.ಡಿ.ಕೆ
ಸುದ್ದಿದಿನ, ಮಂಡ್ಯ : ನವೆಂಬರ್ 23 ರಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವಿವಿಧೆಡೆ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೆರವೇರಿಸುವರು ಎಂದು ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನವೆಂಬರ್ 23 ರಂದು ಮಾನ್ಯ ಮುಖ್ಯಮಂತ್ರಿಯವರು ಮಂಡ್ಯ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
3 ಸಾವಿರ ಕೋಟಿ ವೆಚ್ಚದ ಅಬಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಮಂತ್ರಿಗಳು ಚಾಲನೆ ನೀಡಲಿದ್ದು, ಈ ಸಂಬಂಧ ಅಧಿಕಾರಿಗಳು ವರದಿಯನ್ನು ತಯಾರಿಸಿಸ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಬೇಕು. ಅಲ್ಲದೇ ಆಡಳಿತ್ಮಕ ಮಂಜೂರಾತಿಗೆ ಅವಶ್ಯವಿರುವ ಕಾಮಗಾರಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ನವೆಂಬರ್ 23 ರಂದು 3 ದಿನಗಳ ಕಾಲ ಕೆರೆತೊಣ್ಣೂರಿನಲ್ಲಿ ನಡೆಯುವ ತೊಣ್ಣೂರು ಕೆರೆ ಉತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸುವರು ಹಾಗೂ ಮೇಲುಕೋಟೆಯ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಸ್ಥಳಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸುವರು ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಸಚಿವರುಗಳನ್ನು ಹಾಗೂ ಅಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದು ತಿಳಿಸಿದ ಅವರು ಈ ಸಂಬಂಧ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವಿವಿಧೆಡೆ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಸಮರ್ಪಕವಾಗಿ ಆಯೋಜಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲಿ ವಿಧಾನ ಪರಿಷತ್ ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ.ಯಾಲಕ್ಕಿಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಿವಪ್ರಕಾಶ್ ದೇವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401